

ಕೊಕ್ಕಡ: ಬಯಲು ಆಲಯದಲ್ಲಿರುವ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಆ.27ರಂದು ಭಕ್ತ ಮಹಾಜನರ ಸಹಕಾರದೊಂದಿಗೆ ಬೆಳಿಗ್ಗೆ 8 ರಿಂದ 108 ಕಾಯಿ ಗಣಹೋಮ, ರಂಗಪೂಜೆ ಸಹಿತ ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಕೆ. ಹಾಗೂ ಕಾರ್ಯನಿರ್ವಹಣೆ ಅಧಿಕಾರಿ ಕೆ.ವಿ. ಶ್ರೀನಿವಾಸ್ ತಿಳಿಸಿದ್ದಾರೆ.











