


ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಯಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಅ. 29) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಸಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಸರಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.








