


ನೆಲ್ಯಾಡಿ: ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಆರಾಧ್ಯ ರೈ ಕರ್ನಾಟಕ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪುತ್ತೂರು ತಾಲೂಕಿನಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಆರಾಧ್ಯ ರೈ ಅವರಿಗೆ ಸುಳ್ಯ ನಿರಂತರ ಯೋಗ ಕೇಂದ್ರದ ಯೋಗ ಶಿಕ್ಷಕ ಶರತ್ ಮಾರ್ಗದರ್ಶನ ನೀಡುತ್ತಿದ್ದಾರೆ.
ಸಂಸ್ಥೆಯ ಸಂಚಾಲಕ, ಪ್ರಿನ್ಸಿಪಾಲ್ ಫಾ.ವರ್ಗೀಸ್ ಕೈಪನಡ್ಕ, ಕಾರ್ಯದರ್ಶಿ ಫಾ.ಸಾಮ್ಯುವೆಲ್ ಚಾರ್ಜ್, ಉಪಪ್ರಿನ್ಸಿಪಾಲ್ ಜೋಸ್ ಎಂ.ಜೆ, ಮುಖ್ಯಶಿಕ್ಷಕ ಜಾರ್ಜ್ ಕೆ. ತೋಮಸ್ ಅಭಿನಂದನೆ ಸಲ್ಲಿಸಿದ್ದಾರೆ.








