

ಕೊಕ್ಕಡ: ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಹುಡುಗರ, ಹುಡುಗಿಯರ ವಲಯ ಮಟ್ಟದ ಖೋ ಖೋ ಪಂದ್ಯಾಟವು ಬುಧವಾರ ನಡೆಯಿತು.
ಹುಡುಗಿಯರ ವಿಭಾಗದಲ್ಲಿ ಕೊಕ್ಕಡ ಸರಕಾರಿ ಪ್ರೌಢಶಾಲೆ ತಂಡವು ಪ್ರಥಮ, ಕೊಕ್ಕಡ ಸೈಂಟ್ ಫ್ರಾನ್ಸಿಸ್ ದ್ವಿತೀಯ, ಹುಡುಗರ ವಿಭಾಗದಲ್ಲಿ ಬದನಾಜೆ ಸರಕಾರಿ ಪ್ರೌಢಶಾಲೆ ಪ್ರಥಮ, ಕೊಕ್ಕಡ ಸರಕಾರಿ ಪ್ರೌಢಶಾಲೆ ದ್ವಿತೀಯ ಸ್ಥಾನ ಪಡೆದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಕುಡಾಲ, ಮುಖ್ಯಶಿಕ್ಷಕಿ ರೀನಾ ಎಸ್, ದೈಹಿಕ ಶಿಕ್ಷಣ ಶಿಕ್ಷಕಿ ಬೀನಾ ಸಾಗರ್ ಹಾಗೂ ಶಿಕ್ಷಕ, ಶಿಕ್ಷಕಿಯರು ಉಪಸ್ಥಿತರಿದ್ದರು.






