

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ಉಜಿರೆ – ಚಾರ್ಮಾಡಿ ರಸ್ತೆಯಲ್ಲಿ ಬುಧವಾರ ಲಾರಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಯಾನೆ ಬಾಲು(44) ಅವರು ಗುರುವಾರ ಸಂಜೆ ಮೃತಪಟ್ಟಿದ್ದಾರೆ
ಗಾರೆ ಕಾರ್ಮಿಕರಾಗಿದ್ದ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.






