

ನೆಲ್ಯಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ಹಾಗೂ ಜೆಸಿಐ ನೆಲ್ಯಾಡಿ ಇವರ ಆಶ್ರಯದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮವು ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ನೆಲ್ಯಾಡಿಯಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ವಹಿಸಿದರು.
ಸಂತ ಜಾರ್ಜ್ ಪಿಯು ಕಾಲೇಜಿನ ಪ್ರಾಚಾರ್ಯ ಎಲಿಯಾಸ್ ಎಂ.ಕೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸದಸ್ಯ ರಾಕೇಶ್ ರೈ ಕೆಡೆಂಜೆ ಗುತ್ತು ಅವರು ಮಾತನಾಡಿ, ಮಾದಕ ವಸ್ತುಗಳು ಹಾಗೂ ಇತರ ದುಶ್ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಸ್ಪಷ್ಟವಾದ ಜಾಗೃತಿ ಮೂಡಿಸಿದರು.
ಮುಖ್ಯ ಅತಿಥಿಗಳಾಗಿ ನೋಟರಿ ವಕೀಲ ಇಸ್ಮಾಯಿಲ್ ನೆಲ್ಯಾಡಿ, ಜನಜಾಗೃತಿ ವೇದಿಕೆ ಸದಸ್ಯ ಜಿ. ವರ್ಗಿಸ್, ಪ್ರಗತಿಬಂಧು ಸ್ವ ಸಹಾಯ ಸಂಘಗಳ ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಹಾಗೂ ಕಟ್ಟೆಮಜಲು ಒಕ್ಕೂಟದ ಅಧ್ಯಕ್ಷ ಮಾರ್ಸೆಲ್ ಡಿ. ಸೋಜಾ ಅವರು ಭಾಗವಹಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಜೆಸಿಐ ಯೋಜನಾ ನಿರ್ದೇಶಕ ವಿನ್ಯಾಸ್ ಬಂಟ್ರಿಯಾಲ್, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಸೇವಾಪ್ರತಿನಿಧಿಗಳಾದ ನಮಿತಾ ಎಸ್. ಶೆಟ್ಟಿ, ಮೋಹಿನಿ, ಸುಮನ ಎಸ್., ಹೇಮಾವತಿ ಜೆ., ವೇದಾ ಪಿ. ಅವರು ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದರು.
ಜಯಾನಂದ ಬಂಟ್ರಿಯಾಲ್ ಸ್ವಾಗತಿಸಿದರು. ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ಬಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.






