ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ತಾಂತ್ರಿಕ ಅಧಿಕಾರಿಯಾಗಿ ಪುನೀತ್.ಕೆ ಆಯ್ಕೆ

ಶೇರ್ ಮಾಡಿ

ನೆಲ್ಯಾಡಿ: ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯ ಪುನೀತ್ ಕೆ ಅವರು ವಿಶ್ವ ಪ್ಯಾರಾ ಅಥ್ಲೆಟಿಕ್ ಚಾಂಪಿಯನ್ ಶಿಪ್ ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ತಾಂತ್ರಿಕ ಅಧಿಕಾರಿಯಾಗಿ ಆಯ್ಕೆ.

ಭಾರತದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರದ ಆಶ್ರಯದಲ್ಲಿ ವಿಶ್ವ ಪ್ಯಾರಾ ಅಥ್ಲೆಟಿಕ್ ಕ್ರೀಡಾಕೂಟವು ನವದೆಹಲಿಯ ಜವಾಹರ್ ಲಾಲ್ ನೆಹರು ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸ.25 ರಿಂದ ಅ.5 ರ ವರೆಗೆ ನಡೆಯಲಿದೆ. ಈ ಕ್ರೀಡಾಕೂಟಕ್ಕೆ ತಾಂತ್ರಿಕ ಅಧಿಕಾರಿಯಾಗಿ ಕರ್ನಾಟಕ ರಾಜ್ಯದಿಂದ ಪುನೀತ್ ಕೆ ಅವರು ಆಯ್ಕೆಯಾಗಿದ್ದಾರೆ.

ಅವರು ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಸಂಸ್ಥೆ ಪರವಾಗಿ ಅಭಿನಂದನೆಗಳು.

  •  

Leave a Reply

error: Content is protected !!