

ನೆಲ್ಯಾಡಿ: ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘದ ವತಿಯಿಂದ ಮಾಜಿ ಸಚಿವ ರಮಾನಾಥ ರೈ ಅವರ ಹುಟ್ಟುಹಬ್ಬವನ್ನು ಕೇಕ್ ಕಟ್ ಮಾಡುವ ಮೂಲಕ ಆಚರಿಸಲಾಯಿತು.
ಅತಿಥಿಗಳು ಕೇಕ್ ತಿನ್ನಿಸುವ ಮೂಲಕ ರಮಾನಾಥ ರೈಯವರಿಗೆ ಹುಟ್ಟುಹಬ್ಬದ ಶುಭ ಹಾರೈಕೆ ಮಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಉಷಾ ಅಂಚನ್ ವಹಿಸಿ ಎಲ್ಲರನ್ನೂ ಸ್ವಾಗತಿಸಿದರು.
ವೇದಿಕೆಯಲ್ಲಿ ಜಿ.ಪಂ.ಮಾಜಿ ಸದಸ್ಯರಾದ ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ., ಕಡಬ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್‌ಕುಮಾರ್ ಶೆಟ್ಟಿ, ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಸಂಜೀವ ಪೂಜಾರಿ, ಎಸಿಎಫ್ ಮಧುಸೂದನ್, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಯಂ.ದಯಾಕರ ರೈ, ಬಂಟ್ವಾಳ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೈತನ್ಯ ವಂದಿಸಿದರು.ಸುಧೀರ್‌ಕುಮಾರ್ ನಿರೂಪಿಸಿದರು.






