

ವಿಟ್ಲ : ಕುಳ ಗ್ರಾಮದ ಕಲ್ಲಂದಡ್ಕದಲ್ಲಿ ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ದುಃಖದ ಘಟನೆ ನಡೆದಿದೆ.
ಮೃತ ಬಾಲಕನನ್ನು ಕಬಕ ನಿವಾಸಿ ಹಸೈನಾರ್ ಅವರ ಪುತ್ರ, ಪುತ್ತೂರು ಸಾಲ್ಮರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಆಜ್ಮನ್ (15) ಎಂದು ಗುರುತಿಸಲಾಗಿದೆ.
ಸ್ನೇಹಿತರೊಂದಿಗೆ ಕೋರೆಯ ಬಳಿಗೆ ತೆರಳಿದ್ದಾಗ ಈ ಘಟನೆ ಸಂಭವಿಸಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






