

ನೆಲ್ಯಾಡಿ: ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜು ನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರವು “ನಶಾಮುಕ್ತ ಭಾರತ ಅಭಿಯಾನ” ದಡಿಯಲ್ಲಿ ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ದಂದು ಆರಂಭಗೊಂಡಿತು.

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಫಾ.ಅನೀಶ್ ಪಾರಶೇರಿಲ್ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಮೌಲ್ಯಗಳನ್ನು ಇಂಥ ಶಿಬಿರಗಳು ಕಲಿಸುತ್ತದೆ. ಸಮಾಜದಲ್ಲಿ ಪ್ರೀತಿ-ಸೌಹಾರ್ದತೆಯಿಂದ ಬದುಕುವುದು ಹೇಗೆ ಎಂಬ ಅರಿವು ಮೂಡಿಸುತ್ತದೆ. ಅತಿಯಾದ ಸಂತೋಷವೂ ದುಃಖವೂ ಶಾಶ್ವತವಲ್ಲ, ಅದನ್ನು ತಿಳಿಯುವ ಆತ್ಮವಿಶ್ವಾಸ ಇಂಥ ಶಿಬಿರಗಳಿಂದ ಬರುವುದು ಎಂದರು ಹಾಗೂ ಶಿಬಿರಾರ್ಥಿಗಳಿಗೆ ಶುಭವನ್ನು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಥನಿ ವಿದ್ಯಾಸಂಸ್ಥೆಗಳ ನಿರ್ದೇಶಕ ಫಾ.ಆಂಟನಿ ಪಡಿಪುರಯ್ಕಲ್ ವಹಿಸಿ ಮಾತನಾಡಿದ ಅವರು ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಯುವಜನರ ನಡವಳಿಕೆಗೆ ಬದಲಾವಣೆ ತಂದುಕೊಡುತ್ತದೆ. ಸಾರ್ವಜನಿಕ ಸೇವೆಯ ಹಾದಿಯಲ್ಲಿ ಅವರನ್ನು ಮುನ್ನಡೆಸುತ್ತದೆ ಎಂದರು.
ಈ ಸಂದರ್ಭದಲ್ಲಿ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಸಂಚಾಲಕ ಫಾ.ನೋಮಿಸ್ ಕುರಿಯಾಕೋಸ್, ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್, ಪ್ರಾಚಾರ್ಯ ಏಲಿಯಾಸ್ ಎಂ ಕೆ, ನೂಜಿಬಾಳ್ತಿಲ ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ, ಕಡಬ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಪಿ ವರ್ಗೀಸ್, ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿಪೂರ್ವ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಲಕ್ಷ್ಮಣ ಗೌಡ, ನೆಲ್ಯಾಡಿ ನೋಟರಿ ಇಸ್ಮಾಯಿಲ್ ಎನ್, ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುರಳಿ ಎಚ್, ನೂಜಿಬಾಳ್ತಿಲ ಬೆಥನಿ ಪೂರ್ವ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಭಿಲಾಷ್ ಪಿ.ಕೆ ಸಂದರ್ಬೋಚಿತವಾಗಿ ಮಾತನಾಡಿ ಶಿಬಿರಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ನೆಲ್ಯಾಡಿ ಕಾಮಧೇನು ಮಹಿಳಾ ಸೇವಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್, ನೆಲ್ಯಾಡಿ – ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘಟನೆ ಅಧ್ಯಕ್ಷ ಸತೀಶ್ ಕೆ.ಎಸ್, ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಜಾರ್ಜ್ ಟಿ.ಎಸ್., ಸಹಶಿಬಿರಾಧಿಕಾರಿಗಳು, ಉಪನ್ಯಾಸಕರು ಮತ್ತು ಶಿಬಿರಾರ್ಥಿಗಳು ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಹಶಿಬಿರಾಧಿಕಾರಿ ಉಪನ್ಯಾಸಕ ಮಧು ಎ.ಜೆ ಸ್ವಾಗತಿಸಿದರು, ಶಿಬಿರಾಧಿಕಾರಿ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ, ಕಾರ್ಯಕ್ರಮ ನಿರೂಪಿಸಿದರು. ಸಹಶಿಬಿರಾಧಿಕಾರಿ ಉಪನ್ಯಾಸಕಿ ಗೀತಾ ಪಿ.ಬಿ ವಂದಿಸಿದರು.






