

ನೆಲ್ಯಾಡಿ : ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಅಂಗವಾಗಿ, ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಮಂಗಳೂರು ಇವರ ಸಹಯೋಗದೊಂದಿಗೆ ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ವಿಶ್ವನಾಥ ಪಿ. ರೈ ದೀಪಪ್ರಜ್ವಲನೆಗೊಳಿಸಿ ಉದ್ಘಾಟಿಸಿ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಜೀವನಪೂರ್ತಿ ಯಶಸ್ಸು ಸಾಧಿಸುತ್ತಾರೆ. ಈ ಶಿಬಿರಗಳು ವಿದ್ಯಾರ್ಥಿಗಳಿಗೆ ಶಿಸ್ತು, ಸಮಯಪಾಲನೆ ಮತ್ತು ಜೀವನೋಪಯೋಗಿ ಗುಣಗಳನ್ನು ರೂಢಿಸಿಕೊಳ್ಳಲು ಪಾಠವಾಗುತ್ತವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಜಾರ್ಜ್ ಟಿ.ಎಸ್ ವಹಿಸಿದ್ದರು. ವೇದಿಕೆಯಲ್ಲಿ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್‌ನ ಪಬ್ಲಿಕ್ ಡೆಂಟಿಸ್ಟ್ರಿ ವಿಭಾಗದ ಡಾ.ರಮ್ಯ ಹಾಗೂ ಉಪನ್ಯಾಸಕಿ ಡಾ.ನವ್ಯ ಉಪಸ್ಥಿತರಿದ್ದರು. ಶಿಬಿರದ ಯೋಜನಾಧಿಕಾರಿ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ ಭೇಟಿ:
ಈ ಸಂದರ್ಭ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಶಿಬಿರಕ್ಕೆ ಭೇಟಿ ನೀಡಿ ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್. ಗೌಡ ಉಪಸ್ಥಿತರಿದರು. ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಶಾಸಕಿ ಭಾಗಿರಥಿ ಮುರುಳ್ಯ ಅವರನ್ನು ಸನ್ಮಾನಿಸಲಾಯಿತು.






