ನೆಲ್ಯಾಡಿ ಬೆಥನಿ ಐಟಿಐ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಸಮಾರಂಭ

ಶೇರ್ ಮಾಡಿ

ನೆಲ್ಯಾಡಿ: ಬೆಥನಿ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್‌ನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಸಮಾರಂಭವು ಭವ್ಯವಾಗಿ ನೆರವೇರಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕುಂತೂರು ಸಂತ ಜಾರ್ಜ್ ಹೈ ಸ್ಕೂಲ್‌ನ ಮುಖ್ಯಶಿಕ್ಷಕ ಹರಿಶ್ಚಂದ್ರ ಕೆ. ಮಾತನಾಡಿ ತಾಂತ್ರಿಕ ತರಬೇತಿ ಕೇವಲ ವ್ಯಕ್ತಿಯ ಭವಿಷ್ಯವನ್ನೇ ರೂಪಿಸುವುದಲ್ಲ, ರಾಷ್ಟ್ರಕ್ಕೂ ಶಕ್ತಿ ತುಂಬುವ ಕೆಲಸ ಮಾಡುತ್ತದೆ. ಐಟಿಐ ತರಬೇತಿ ಕೇವಲ ಪ್ರಮಾಣಪತ್ರಕ್ಕೆ ಸೀಮಿತವಾಗದೆ, ಕೌಶಲ್ಯ ಗಳಿಸುವ ಮೂಲಕ ಕೈಗಾರಿಕೆಗಳಲ್ಲಿ ಸಾಧನೆ ತರುವಂತಾಗಬೇಕು. ದೀಪವು ಜ್ಞಾನದ ಸಂಕೇತವಾದಂತೆ, ಸಂಸ್ಥೆಯ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮುಖ್ಯ ಎಂದು ಹೇಳಿದರು.

ಸಂಸ್ಥೆಯ ಪೂರ್ವ ವಿದ್ಯಾರ್ಥಿ ವಿವೇಕಾನಂದ ಪಿ. ಮಾತನಾಡಿ, ಜೀವನದಲ್ಲಿ ಶಿಸ್ತು ಮತ್ತು ನಾಯಕತ್ವವನ್ನು ಮೈಗೂಡಿಸಿಕೊಂಡು ಕರ್ತವ್ಯ ನಿರತರಾದರೆ ಸಾಧನೆಗಳು ಖಂಡಿತವಾಗಿಯೂ ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಥನಿ ವಿದ್ಯಾಸಂಸ್ಥೆಯ ಸಂಚಾಲಕ ಫಾ.ಡಾ.ವರ್ಗೀಸ್ ಕೈಪನಡ್ಕ ವಹಿಸಿದ್ದರು. ಸಂಸ್ಥೆಯ ನಿರ್ದೇಶಕ ಫಾ.ಜಾರ್ಜ್ ಸ್ಯಾಮುವೆಲ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಪ್ರಾಂಶುಪಾಲರಾದ ಸಜಿ ಕೆ. ತೋಮಸ್ ನೂತನ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ವಿದ್ಯಾರ್ಥಿ ಪವನ್ ನೂತನ ಪದಾಧಿಕಾರಿಗಳ ಪರಿಚಯ ಮಾಡಿಕೊಟ್ಟರು.

ಕಾರ್ಯಕ್ರಮವನ್ನು ಕೋಪಾ ವಿದ್ಯಾರ್ಥಿಗಳು ಪ್ರಾರ್ಥನೆಯೊಂದಿಗೆ ಆರಂಭಿಸಿದರು. ತರಬೇತಿ ಅಧಿಕಾರಿ ಜಾನ್ ಪಿ.ಎಸ್. ಸ್ವಾಗತಿಸಿದರು, ಕಿರಿಯ ತರಬೇತಿ ಅಧಿಕಾರಿ ಸುಬ್ರಾಯ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಿರಿಯ ತರಬೇತಿ ಅಧಿಕಾರಿ ಹರಿಪ್ರಸಾದ್ ರೈ ವಂದಿಸಿದರು.

  •  

Leave a Reply

error: Content is protected !!