ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣ: ತಿಮರೋಡಿ ನಿರೀಕ್ಷಣ ಜಾಮೀನು ಅರ್ಜಿ ವಜಾ

ಶೇರ್ ಮಾಡಿ

ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ಗುರುವಾರ (ಅ.9) ವಜಾಗೊಳಿಸಿದೆ.

ಇಂದು ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು ಈ ವೇಳೆ ನ್ಯಾಯಾಧೀಶರಾದ ಬಸವರಾಜ ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಅಂದರೆ ಸೆ.30ಕ್ಕೆ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಅ.4ಕ್ಕೆ ವಿಚಾರಣೆಯನ್ನು ಮುಂದೂಡಿದ್ದರು. ಅದರಂತೆ ಶನಿವಾರ (ಅ.4) ನ್ಯಾಯಾಧೀಶರು ವಿಚಾರಣೆ ಆರಂಭಿಸಿದ್ದರು. ಈ ಸಂದರ್ಭ ಮಹೇಶ್ ಶೆಟ್ಟಿ ತಿಮರೋಡಿ ಪರ ನ್ಯಾಯಾವಾದಿ ದಿನೇಶ್ ಹೆಗ್ಡೆ ಉಳೆಪ್ಪಾಡಿ ಲಿಖಿತ ಹೇಳಿಕೆ ಸಲ್ಲಿಸಿದರು. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ನಿರೀಕ್ಷಣಾ ಜಾಮೀನಿನ ಮೇಲಿನ ಅರ್ಜಿಗೆ ಸಂಬಂಧಿಸಿದಂತೆ ಅ.9ರಂದು ಆದೇಶ ನೀಡುವುದಾಗಿ ಪ್ರಕಟಿಸಿದ್ದರು. ಅದರಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

  •  

Leave a Reply

error: Content is protected !!