

ಧರ್ಮಸ್ಥಳ: ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭಾನುವಾರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಿದರು.

ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ಬಳಿಕ ಹೆಗ್ಗಡೆಯವರ ನಿವಾಸದಲ್ಲಿ ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು.
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ.ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.






