ಆಲಂಕಾರು ಭಾರತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಒಲಿಂಪಿಕ್ ಕಬ್ಬಡಿ ಪಂದ್ಯಾಟಕ್ಕೆ ಆಯ್ಕೆ

ಶೇರ್ ಮಾಡಿ

ಅಲಂಕಾರು: ರಾಜ್ಯ ಮಟ್ಟದಲ್ಲಿ ನಡೆಯಲಿರುವ 4ನೇ ಒಲಿಂಪಿಕ್ ಕಬ್ಬಡಿ ಪಂದ್ಯಾಟದಲ್ಲಿ ಆಲಂಕಾರು ಭಾರತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರು ಭಾಗವಹಿಸುವ ಅವಕಾಶ ಪಡೆದು ಶಾಲೆಗೆ ಹೆಮ್ಮೆ ತಂದುಕೊಟ್ಟಿದ್ದಾರೆ.

ಡಿಪಾರ್ಟ್ಮೆಂಟ್ ಆಫ್ ಎಂಪಾಯರ್‌ಮೆಂಟ್ ಅಂಡ್ ಸ್ಪೋರ್ಟ್ಸ್ ಹಾಗೂ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್‌ ಇವರ ಸಹಯೋಗದಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಈ ರಾಜ್ಯಮಟ್ಟದ ಒಲಿಂಪಿಕ್ ಕಬ್ಬಡಿ ಪಂದ್ಯಾಟದಲ್ಲಿ ಆಲಂಕಾರು ಭಾರತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರಾದ ತೃಷಾ ಕೋಡಂದೂರು, ಚಾರ್ವಾಕ ಹಾಗೂ ಧನ್ಯಶ್ರೀ ಕುಂತೂರು, ಅವರು ಆಯ್ಕೆಯಾಗಿದ್ದಾರೆ.

ಈ ಇಬ್ಬರು ಪ್ರತಿಭಾವಂತ ಕ್ರೀಡಾ ಪಟುಗಳು ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಲಿದ್ದು, ಶಾಲೆಯ ಪರವಾಗಿ ಕ್ರೀಡಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ತರಬೇತಿಯನ್ನು ಶಾಲಾ ಆಡಳಿತ ಮಂಡಳಿ ಸಹಕಾರದೊಂದಿಗೆ ಮುಖ್ಯ ಮಾತಾಜಿ ಆಶಾ ಎಸ್. ರೈ, ಮುಖ್ಯಶಿಕ್ಷಕ ಸತೀಶ್ ಕುಮಾರ್ ಜಿ.ಆರ್. ಬಲ್ಯ ಇವರ ಮಾರ್ಗದರ್ಶನದಲ್ಲಿ, ಶಿಕ್ಷಕರಾದ ಚಂದ್ರಹಾಸ ಕೆ.ಸಿ. ಕುಂಟ್ಯಾನ ಅವರು ನೀಡಿರುತ್ತಾರೆ.

  •  

Leave a Reply

error: Content is protected !!