ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಮೂಲ ಪ್ರಕರಣ ರದ್ದುಕೋರಿ ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ

ಶೇರ್ ಮಾಡಿ

ಧರ್ಮಸ್ಥಳ: ಧರ್ಮಸ್ಥಳ ವಿರುದ್ಧ ಸಾಕಷ್ಟು ಆರೋಪ ಹೊರಿಸಿ, ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಬುರುಡೆ ಗ್ಯಾಂಗ್ ಇದೀಗ ದಿಢೀ‌ರ್ ಆಗಿ ದೂರದಾರ ಚಿನ್ನಯ್ಯನ ಹೇಳಿಕೆ ಆಧಾರದ ಮೇಲೆ ದಾಖಲಾಗಿದ್ದ ಮೂಲ ಪ್ರಕರಣವನ್ನೇ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿರುವ ಪ್ರಸಂಗ ನಡೆದಿದೆ.

ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವ‌ರ್, ಮಹೇಶ್‌ ತಿಮರೋಡಿ, ಜಯಂತ್ ಹಾಗೂ ವಿಠಲ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್, ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್‌ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವ‌ರ್, ಮಹೇಶ್‌ ಶೆಟ್ಟಿ ತಿಮರೋಡಿ, ಟಿ. ಜಯಂತ್ ಹಾಗೂ ವಿಠಲಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ದಿನ ನಿಗದಿಯಾಗಿದೆ.

  •  

Leave a Reply

error: Content is protected !!