ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಪೋಲಿಸ್ ವಶಕ್ಕೆ

ಶೇರ್ ಮಾಡಿ

ಮಂಗಳೂರು: ಇತ್ತೀಚೆಗೆ ಭಾರೀ ಸದ್ದು ಮಾಡಿದ್ದ ಆರ್‌ಎಸ್‌ಎಸ್ ಮುಖಂಡರೊಬ್ಬರ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಶುಕ್ರವಾರ (ಅ.31) ಮಂಗಳೂರಿನ ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೊದಲು ಪಂಪ್ ವೆಲ್ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು. ಹಿಂದೂ ಪರ ಸಂಘಟನೆ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಾಕಿದ್ದ ಆಕ್ಷೇಪಾರ್ಹ ಕಮೆಂಟ್ ಅನ್ನು ಶೇರ್ ಮಾಡಿದ ಕಾರಣಕ್ಕೆ ವಿಎಚ್‌ಪಿ ಮುಖಂಡ ಶರಣ್ ಶರಣ್ ಪಂಪ್‌ವೆಲ್‌ರನ್ನು ವಿಚಾರಣೆಗೆ ಪೊಲೀಸ್ ಠಾಣೆ ಗೆ ಕರೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಕದ್ರಿ ಪೊಲೀಸ್‌ ಠಾಣೆಗೆ ವಿಚಾರಣೆಗೆ ಕರೆಸಲಾಗಿದ್ದು, ಈಗಾಗಲೇ ಶರಣ್ ಪಂಪ್ ವೆಲ್ ಶೇರ್ ಮಾಡಿದ್ದ ಕಮೆಂಟ್ ಈಗಾಗಲೇ ಡಿಲೀಟ್ ಆಗಿದೆ. ವಿಕಾಸ್ ಎಂಬಾತ ಹಾಕಿದ್ದ ಕಮೆಂಟ್ ಅನ್ನು ಶರಣ್ ಪಂಪ್ ವೆಲ್ ಶೇರ್ ಮಾಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ತಿಳಿಸಿದರು.

  •  

Leave a Reply

error: Content is protected !!