ನಾಳೆ(ನ.1) ಜಿಲ್ಲಾಮಟ್ಟದ ಕ್ರಾಸ್ ಕಂಟ್ರಿ ಓಟ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ

ಶೇರ್ ಮಾಡಿ

ನೆಲ್ಯಾಡಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಮಂಗಳೂರು ಹಾಗೂ ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ 2025ರ ಜಿಲ್ಲಾಮಟ್ಟದ ಪುರುಷರು ಮತ್ತು ಮಹಿಳೆಯರ ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್ ನ.1ರಂದು ಅದ್ಧೂರಿಯಾಗಿ ನಡೆಯಲಿದೆ.

ಬೆಳಿಗ್ಗೆ 6.30ಕ್ಕೆ ಪುರುಷರ ವಿಭಾಗದ ಓಟಕ್ಕೆ ವಲಯಮಟ್ಟದ ನೋಡಲ್ ಅಧಿಕಾರಿ ಕುಶಾಲಪ್ಪ ಗೌಡ ಧ್ವಜ ಪ್ರದಾನ ಮಾಡಿ ಓಟಕ್ಕೆ ಚಾಲನೆ ನೀಡಲಿದ್ದಾರೆ. ಅದೇ ರೀತಿ ಮಹಿಳಾ ವಿಭಾಗದ ಓಟಕ್ಕೆ ಬೆಳಿಗ್ಗೆ 7.00ಕ್ಕೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಧ್ವಜ ಪ್ರದಾನ ಮಾಡಲಿದ್ದಾರೆ.

ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಪುರುಷರು ಮತ್ತು ಮಹಿಳಾ ಕ್ರೀಡಾಪಟುಗಳು ಉತ್ಸಾಹಭರಿತವಾಗಿ ಭಾಗವಹಿಸಲಿದ್ದಾರೆ. ಕ್ರೀಡಾಪಟುಗಳ ಪ್ರತಿಭೆಯನ್ನು ಹೊರಹಾಕುವ ಜೊತೆಗೆ ಕ್ರೀಡಾಸ್ಪೂರ್ತಿ, ಶಿಸ್ತಿನ ಹಾಗೂ ಸೌಹಾರ್ದದ ಸಂದೇಶವನ್ನು ಹರಡುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.

ನಂತರ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಂತ ಜಾರ್ಜ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಫಾ.ನೋಮಿಸ್ ಪಿ. ಕುರಿಯಾಕೋಸ್ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ ಶೆಟ್ಟಿ, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ರಾಜೇಶ್ವರಿ ಎಚ್ ಎಚ್., ಬೆಳ್ತಂಗಡಿ ಸರ್ಕಾರಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಧಾಕೃಷ್ಣ, ನೆಲ್ಯಾಡಿ ಪಂಚಾಯತ್ ಅಧ್ಯಕ್ಷ ಸಲಾಂ ಬಿಲಾಲ್, ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ರಾಧಾಕೃಷ್ಣ, ನೆಲ್ಯಾಡಿ ಪಂಚಾಯತ್ ಸದಸ್ಯ ಮಹಮ್ಮದ್ ಇಕ್ಬಾಲ್, ನೆಲ್ಯಾಡಿ ವಕೀಲ ಮತ್ತು ನೋಟರಿ ಎನ್. ಇಸ್ಮಾಯಿಲ್ ಭಾಗವಹಿಸಲಿದ್ದಾರೆ.

ಸಂತ ಜಾರ್ಜ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಫಾ.ಅನಿಲ್ ಪರಶೇರಿಲ್, ಪ್ರಾಂಶುಪಾಲರಾದ ಎಲಿಯಾಸ್ ಎಂ.ಕೆ., ದೈಹಿಕ ಶಿಕ್ಷಣ ಉಪನ್ಯಾಸಕ ಮಹಮ್ಮದ್ ಹಾರಿಸ್ ಎನ್., ಸಂಸ್ಥೆಯ ನಿರ್ವಹಣಾ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಹಾಗೂ ದಕ್ಷಿಣ ಕನ್ನಡದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಕಾರ್ಯಕ್ರಮದ ಯಶಸ್ವಿಗಾಗಿ ಸಜ್ಜಾಗಿದ್ದಾರೆ.

  •  

Leave a Reply

error: Content is protected !!