ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡ ಎ.ಜಿ.ಎಂ ಅಮಿತ್ ಶೆಟ್ಟಿ ದಂಪತಿಗಳು ಭೇಟಿ

ಶೇರ್ ಮಾಡಿ

ಕೊಕ್ಕಡ: ಬ್ಯಾಂಕ್ ಆಫ್ ಬರೋಡ ಸಂಸ್ಥೆಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಎ.ಜಿ.ಎಂ) ಅಮಿತ್ ಶೆಟ್ಟಿ ದಂಪತಿಗಳು ಶನಿವಾರ ಸೌತಡ್ಕ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಅಮಿತ್ ಶೆಟ್ಟಿ ದಂಪತಿಗಳಿಗೆ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶೆಟ್ಟಿ ಅವರು ಬ್ಯಾಂಕ್ ಆಫ್ ಬರೋಡ ಸಂಸ್ಥೆಯ ಸಿ.ಎಸ್.ಆರ್. (ಸಾಮಾಜಿಕ ಹೊಣೆಗಾರಿಕೆ ನಿಧಿ) ಯಿಂದ ಶ್ರೀ ಕ್ಷೇತ್ರದ ಅಭಿವೃದ್ಧಿ ಹಾಗೂ ಸಾರ್ವಜನಿಕ ಉಪಯೋಗದ ಕಾರ್ಯಗಳಿಗೆ ಆರ್ಥಿಕ ಸಹಾಯ ನೀಡಲು ಸಕಾರಾತ್ಮಕ ಸ್ಪಂದನೆ ನೀಡುವುದಾಗಿ ಭರವಸೆ ನೀಡಿದರು. ಶಿಶಿಲ ಶಾಖೆಯ ಪ್ರಬಂಧಕರಾದ ಯೋಗೀಶ್ ಉಪಸ್ಥಿತರಿದ್ದರು.

  •  

Leave a Reply

error: Content is protected !!