ಬರೆಂಗಾಯದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ

ಶೇರ್ ಮಾಡಿ

ಕೊಕ್ಕಡ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವು ಬರೆಂಗಾಯದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.

ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ಯಾಮಲಾ ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯು ನಿಜಾರ್ಥದಲ್ಲಿ ದೇಶ ಸೇವೆಯ ವೇದಿಕೆ. ಶಿಬಿರಾರ್ಥಿಗಳು ಶಿಬಿರದಲ್ಲಿ ಕಲಿಯುವ ಶಿಸ್ತು, ಸಹಕಾರ ಮತ್ತು ಸಾಮಾಜಿಕ ಜವಾಬ್ದಾರಿಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನಿಜವಾದ ಸ್ವಯಂಸೇವಕರಾಗಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಅವರು ಮಾತನಾಡಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವದ ಬೆಳವಣಿಗೆಯ ಜೊತೆಗೆ ಗ್ರಾಮೀಣ ಬದುಕಿನ ಅರಿವು ನೀಡುತ್ತದೆ. ದೇಶದ ಯುವ ಶಕ್ತಿ ಸಾಮಾಜಿಕ ಬದಲಾವಣೆಯ ಮೂಲ ಶಕ್ತಿ ಆಗಬೇಕಾದರೆ ಇಂತಹ ಶಿಬಿರಗಳು ಅವಶ್ಯಕ ಎಂದು ಹೇಳಿದರು.

ಈ ಸಂದರ್ಭ ನಿಡ್ಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ “ನಶಾ ಮುಕ್ತ ಭಾರತ” ಕುರಿತ ಕರಪತ್ರವನ್ನು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ಸದಸ್ಯೆ ಶೈಲಜಾ, ನಿಸರ್ಗ ಯುವಜನತೆ ಮಂಡಲ ಗೌರವಾಧ್ಯಕ್ಷ ನವೀನ್ ಕುಮಾರ್ ಗಾಂತ್ರೋಡ್, ಬರೆಂಗಾಯ ಶಾಲೆಯ ಮುಖ್ಯ ಶಿಕ್ಷಕ ಗೋಪಾಲ್, ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಗೋಪಾಲ್ ಸ್ವಾಗತಿಸಿದರು, ಸ್ವಯಂಸೇವಕಿ ಧನ್ಯ ಕಾರ್ಯಕ್ರಮ ನಿರೂಪಿಸಿದರು. ಸಹಯೋಜನಾಧಿಕಾರಿ ಶೋಭಾ ವಂದಿಸಿದರು.

  •  

Leave a Reply

error: Content is protected !!