ಇನ್ನೋವಾ ಕಾರು ನಿಯಂತ್ರಣ ತಪ್ಪಿ ಡಿಕ್ಕಿ; ಮೂವರು ಮೃತರು, ಆರು ಜನರಿಗೆ ಗಂಭೀರ ಗಾಯ

ಶೇರ್ ಮಾಡಿ

ಬಂಟ್ವಾಳ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನ.15ರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ದುಃಖದ ಘಟನೆ ಬಂಟ್ವಾಳ ಬಿ.ಸಿ.ರೋಡ್ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದ ಉಡುಪಿ ದಿಕ್ಕಿಗೆ ತೆರಳುತ್ತಿದ್ದ ನೊಂದಣಿ ಸಂಖ್ಯೆಯ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ನಾರಾಯಣ ಗುರು ವೃತ್ತಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂಬತ್ತು ಜನರ ಪೈಕಿ ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75), ರಮ್ಯಾ (23) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಪ್ರಯಾಣಿಕರಾದ ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಹನದಲ್ಲಿದ್ದವರಲ್ಲರೆಲ್ಲ ಸಂಬಂಧಿಕರು ಆಗಿದ್ದು, ಒಟ್ಟಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಘಟನೆಯ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ ತಪಾಸಣೆ ನಡೆಸಿದ್ದು, ಅಪಘಾತ ಕುರಿತು ಅ.ಕ್ರ: 151/25, ಕಲಂ: 281, 125A, 106 BNS ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  •  

Leave a Reply

error: Content is protected !!