ನೇಸರ ಮಾ.15:ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ಯುವ ಜೇಸಿ ವಿಭಾಗ, ಬೆಳ್ಳಾರೆ, ಕ್ಷಯ ಚಿಕಿತ್ಸಾ ಕೇಂದ್ರ ದಕ್ಷಿಣ ಕನ್ನಡ ಜಿಲ್ಲೆ, ಕ್ಷಯ ಚಿಕಿತ್ಸಾ ಘಟಕ, ಸುಳ್ಯ, ಸಾರ್ವಜನಿಕ ಆಸ್ಪತ್ರೆ ಸುಳ್ಯ, ಇವುಗಳ ಆಶ್ರಯದಲ್ಲಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಟಿ ಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ ಅಭಿಯಾನದ ಅಂಗವಾಗಿ ರಸಪ್ರಶ್ನೆ ಸ್ಪರ್ಧೆಯನ್ನು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.
ಎನ್ನೆಂಸಿಯ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ ಬಾಲಚಂದ್ರ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಕೆವಿಜಿ ಮೆಡಿಕಲ್ ಕಾಲೇಜಿನ ಆರೋಗ್ಯ ಸಂದರ್ಶಕ ದಾಮೋದರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೆಡ್ ಕ್ರಾಸ್ ಸದಸ್ಯೆ ರತ್ನಸಿಂಚನ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಸುಳ್ಯ ಕ್ಷಯ ಚಿಕಿತ್ಸಾ ಘಟಕದ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಸಂಘಟಿಸಿ, ನಿರ್ವಹಿಸಿದ ಕಾರ್ಯಕ್ರಮದಲ್ಲಿ ಬೆಳ್ಳಾರೆ ಯುವ ಜೇಸಿ ಘಟಕದ ಅಧ್ಯಕ್ಷೆ ಚೈತನ್ಯ ಸ್ವಾಗತಿಸಿ, ರೆಡ್ ಕ್ರಾಸ್ ಘಟಕ ನಾಯಕಿ ಲಿಮಿತ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾಲೇಜಿನ 75 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉಪನ್ಯಾಸಕಿ ಚಿತ್ರಲೇಖಾ ಕೆ ಎಸ್ ಸಹಕರಿಸಿದರು.