ಜಿಲ್ಲಾ ಮಟ್ಟದ ಟೆಕ್ವಾಂಡೋ ಸ್ಪರ್ಧೆಯಲ್ಲಿ ನೆಲ್ಯಾಡಿ ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ವಿದ್ಯಾಸಂಸ್ಥೆಗೆ 9 ಚಿನ್ನ, 11 ಬೆಳ್ಳಿ ಮತ್ತು 2 ಕಂಚು ಪದಕ

ಶೇರ್ ಮಾಡಿ

ನೆಲ್ಯಾಡಿ: ಮಂಗಳೂರಿನ ಲಾಲ್ ಬಾಗ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಟೆಕ್ವಾಂಡೋ ಸ್ಪರ್ಧೆಯಲ್ಲಿ ನೆಲ್ಯಾಡಿ ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಒಟ್ಟು 9 ಚಿನ್ನ, 11 ಬೆಳ್ಳಿ ಮತ್ತು 2 ಕಂಚು ಪದಕಗಳನ್ನು ಪಡೆದಿದ್ದಾರೆ.

ವಿದ್ಯಾಸಂಸ್ಥೆಯ 22 ಬಾಲಕರು ಮತ್ತು 3 ಬಾಲಕಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಪದಕಗಳನ್ನು ಗೆದ್ದು ಶಾಲೆಗೆ ಗೌರವ ತಂದಿದ್ದಾರೆ.

ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಅಭಿನಂದಿಸಿ ಭವಿಷ್ಯದಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದರು ಅಲ್ಲದೆ ಈ ಯಶಸ್ಸು ಪಾಠ್ಯೇತರ ಚಟುವಟಿಕೆಗಳಿಗೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಅಧ್ಯಕ್ಷ ನಾಝೀಂ ಸಾಹೇಬ್, ಸದಸ್ಯರಾದ ರಫೀಕ್ ಅಲಂಪಾಡಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಕರಾಟೆ ಶಿಕ್ಷಕ ಶಿಹಾಬ್ ಹಾಗೂ ವಿಜೇತ ವಿದ್ಯಾರ್ಥಿಗಳಿಗೆ ವಿದ್ಯಾಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖ್ಯಶಿಕ್ಷಕಿ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.

  •  

Leave a Reply

error: Content is protected !!