ಕಾಯರ್ತಡ್ಕ ಕಳೆಂಜ ಪ್ರೌಢಶಾಲೆಯಲ್ಲಿ ನೈರ್ಮಲ್ಯ–ಪರಿಸರ ಜಾಗೃತಿ ಕಾರ್ಯಕ್ರಮ

ಶೇರ್ ಮಾಡಿ

ನೆಲ್ಯಾಡಿ: ವಿದ್ಯಾರ್ಥಿಗಳು ಜೀವನದಲ್ಲಿ ಶ್ರೇಷ್ಠ ಕಲಿಕೆಯನ್ನು ಹೊಂದಲು ಉತ್ತಮ ನೈರ್ಮಲ್ಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದು ಕಾಲದ ಅಗತ್ಯವಾಗಿದೆ. ಉತ್ತಮ ಪರಿಸರ ಕಾಳಜಿಯೊಂದಿಗೆ ಓದು-ಬರಹದ ಗುಣಮಟ್ಟವೂ ಹೆಚ್ಚುತ್ತದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಕಾರ್ಯಪಾಲಕ ಇಂಜಿನಿಯರ್ ಜಯಪ್ರಕಾಶ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ನೆ.21ರಂದು ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಕಳೆಂಜದಲ್ಲಿ ನಡೆದ ಮಾಹಿತಿ–ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ಕಳೆಂಜ ಗ್ರಾಮ ಪಂಚಾಯಿತಿ ಇವರ ಸಹಭಾಗಿತ್ವದಲ್ಲಿ ಮಕ್ಕಳಿಗಾಗಿ ಚಿತ್ರಕಲೆ ಸ್ಪರ್ಧೆ ಮತ್ತು ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಶಿಕ್ಷಕರು ಕೃಷ್ಣಪ್ಪ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ, ಜಿಲ್ಲಾ ಪಂಚಾಯಿತಿ ಡಿಪಿಎಂ ವಿಜ್ಞೇಶ್ ರಾಜ್, ಪಂಚಾಯತ್ ಸದಸ್ಯರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮವನ್ನು ಸಂಯೋಜಿಸಿದ ಶಿವರಾಂ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ವಿವರಿಸಿದರು. ಶಿಕ್ಷಕ ಆನಂದ ಕಾರ್ಯಕ್ರಮ ನಿರೂಪಿಸಿದರು.

  •  

Leave a Reply

error: Content is protected !!