ಹಿಜಾಬ್ ಕುರಿತು ಹೈಕೋರ್ಟ್‌ ತೀರ್ಪು: ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ, ಸಮವಸ್ತ್ರ ನಿಯಮ ಆದೇಶ ಸರಿ

ಶೇರ್ ಮಾಡಿ

ಹಿಜಾಬ್ ವಿಚಾರಣೆ ಕುರಿತ ತೀರ್ಪು ನೀಡಿದ ಹೈಕೋರ್ಟ್‌.
ಕರ್ನಾಟಕ ಹೈಕೋರ್ಟ್‌ ತ್ರಿಸದಸ್ಯ ಪೀಠದಿಂದ ತೀರ್ಪು.
ಸರ್ಕಾರ ಸಮವಸ್ತ್ರ ಆದೇಶ ಎತ್ತಿಹಿಡಿದ ಹೈಕೋರ್ಟ್‌

ನೇಸರ ಮಾ.15: ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದ ಕರ್ನಾಟಕ ಹೈಕೋರ್ಟ್‌ನ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್‌, ನ್ಯಾಯಮೂರ್ತಿ ಎಸ್‌ ಕೃಷ್ಣ ದೀಕ್ಷಿತ್ ರವರ ತ್ರಿಸದಸ್ಯ ಪೀಠ ಇಂದು ಅಂತಿಮ ತೀರ್ಪು ನೀಡಿದೆ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್‌ ತ್ರಿಸದಸ್ಯ ಪೀಠ ಹೇಳಿದೆ.
ಸಮವಸ್ತ್ರ ಕುರಿತು ಸರ್ಕಾರ ಏನು ಆದೇಶ ನೀಡಿತ್ತೋ ಅದು ಸರಿಯಾಗಿದೆ. ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಅದರ ಪ್ರಕಾರ ಪಾಲನೆ ಮಾಡಬೇಕು. ಸರ್ಕಾರ ಶಾಲಾ, ಕಾಲೇಜುಗಳಿಗೆ ಏನು ವಸ್ತ್ರ ಸಂಹಿತೆ ನೀಡಿದೆಯೋ, ಶಾಲೆ ಏನು ಸಮವಸ್ತ್ರ ನಿಯಮ ನೀಡುತ್ತದೋ ಅದನ್ನು ಪಾಲನೆ ಮಾಡಬೇಕು ಎಂದು ಹೈಕೋರ್ಟ್‌ ಹೇಳಿದೆ.
ಸಮವಸ್ತ್ರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಹೈಕೋರ್ಟ್‌ ತ್ರಿಸದಸ್ಯ ಪೀಠ ಎತ್ತಿಹಿಡಿದಿದೆ.
ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಿದ್ದ ಹಿಜಾಬ್ ಧಾರಿಗಳ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.
ಯಾವುದೇ ಶಾಲೆ, ಕಾಲೇಜುಗಳು ಹಿಜಾಬ್ ಧರಿಸಲು ಅವಕಾಶ ನೀಡಿಲ್ಲ ಎಂದರೆ ಅದು ಹಿಜಾಬ್ ಕುರಿತು, ಇಸ್ಲಾಂ ಧಾರ್ಮಿಕ ಹಕ್ಕಿನ ಕುರಿತು ಉಲ್ಲಂಘನೆ ಆಗುವುದಿಲ್ಲ ಎಂದು ಹೈಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆ. ವಿದ್ಯಾರ್ಥಿನಿಯರು ಸರ್ಕಾರದ ವಸ್ತ್ರಸಂಹಿತೆ ಅಥವಾ ಆಯಾ ಶಾಲಾ, ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಏನು ವಸ್ತ್ರ ಸಂಹಿತೆ ನಿಯಮ ನೀಡುತ್ತವೋ ಅದನ್ನು ಕಡ್ಡಾಯವಾಗಿ ವಿದ್ಯಾರ್ಥಿನಿಯರು ಪಾಲನೆ ಮಾಡಬೇಕು ಎಂಬುದು ಹೈಕೋರ್ಟ್‌ನ ತೀರ್ಪು ಆಗಿದೆ.

ವೀಕ್ಷಿಸಿ Subscribers ಮಾಡಿ

Leave a Reply

error: Content is protected !!