ಕೊಕ್ಕಡ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ

ಶೇರ್ ಮಾಡಿ

ಕೊಕ್ಕಡ: ಕೊಕ್ಕಡ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಮೂಲಭೂತ ಸೌಕರ್ಯಾಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಜರಗಿತು. ಪಂಚಾಯತಿ ನಿಧಿಯಿಂದ ಒಟ್ಟು 4 ಲಕ್ಷ ರೂ. ಅನುದಾನದಲ್ಲಿ ಈ ಕಾಮಗಾರಿಗಳು ಕೈಗೆತ್ತಿಕೊಳ್ಳಲಾಗಿದೆ.

ಅಡೈ ಪರಿಶಿಷ್ಟ ಜಾತಿ ಕಾಲೋನಿ ಸಂಪರ್ಕ ರಸ್ತೆ ಕಾಮಗಾರಿಗೆ 2 ಲಕ್ಷ ರೂ., ಹಳ್ಳಿಂಗೇರಿ–ಸೌತಡ್ಕ ಸಂಪರ್ಕ ರಸ್ತೆಯಲ್ಲಿರುವ ಮಲ್ಲಿಗೆಮಜಲ್ ಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ 1 ಲಕ್ಷ ರೂ., ಹಾಗೂ ಹಾರ- ಪಡ್ಡಡ್ಕ ಒಳ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ 1 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.

ಕಾಮಗಾರಿಯ ಶಿಲಾನ್ಯಾಸವನ್ನು ಕೊಕ್ಕಡ ಗ್ರಾಮ ಪಂಚಾಯತಿ ಅಧ್ಯಕ್ಷೆ ಬೇಬಿ ಹಾಗೂ ಕೊಕ್ಕಡ ಸಿ.ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕೊಕ್ಕಡ ಪಂಚಾಯತಿ ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಿಗೆಮಜಲು, ಪಂಚಾಯತಿನ ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ, ಸದಸ್ಯರಾದ ಪವಿತ್ರ, ವನಜಾಕ್ಷಿ, ಜಗದೀಶ್ ಕೆಂಪಕೋಡಿ, ಲತಾ, ಪುರುಷೋತ್ತಮ, ಜಾನಕಿ, ಕೊಕ್ಕಡ ಸಿ.ಎ ಬ್ಯಾಂಕ್ ನಿರ್ದೇಶಕರು ಶ್ರೀನಾಥ್ ಬಡಕೈಲು, ರವಿಚಂದ್ರ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ ಪ್ರಶಾಂತ್ ಪೂವಾಜೆ, ಬೆಳ್ತಂಗಡಿ ಮಂಡಲ ಎಸ್‌ಟಿ ಮೋರ್ಚಾ ಕಾರ್ಯದರ್ಶಿ ವಿಠಲ್ ಕುರ್ಲೆ, ಬೂತ್ ಸಮಿತಿ ಅಧ್ಯಕ್ಷ ಲಿಂಗಪ್ಪಗೌಡ ಕಡಿರ, ಕಾರ್ಯದರ್ಶಿ ಶ್ರೀಧರ ಬಳಕ, ಕಿಶೋರ್ ಪೋಯ್ಯೋಳೆ ಹಾಗೂ ಪಂಚಾಯತಿ ಸಿಬಂದಿ ಕೇಶವ ಉಪಸ್ಥಿತರಿದ್ದರು.

  •  

Leave a Reply

error: Content is protected !!