

ಕಡಬ: ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯ ವಾರ್ಷಿಕ ದಿನಾಚರಣೆ ‘ಉತ್ಸವ್ 2K25’ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಸ್ಥೆಯ ಹಳೆ ವಿದ್ಯಾರ್ಥಿನಿ ನಿಶ್ಚಿತಾ ಚೇತನ್ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಇಂದಿನ ಆಧುನಿಕ ಯುಗದಲ್ಲಿ ಸಮಾನವಾಗಿ ಕಾಣುವ ಸನ್ನಿವೇಶ ನಮ್ಮ ಮುಂದಿದೆ. ಕೌಶಲ್ಯಗಳನ್ನು ರೂಢಿಸಿಕೊಳ್ಳಲು ಹೊಸ ಹೊಸ ಪರಿಕಲ್ಪನೆಯ ಇಂತಹ ರಚನಾತ್ಮಕ ಕಾರ್ಯಕ್ರಮಗಳು ಅಗತ್ಯ ಎಂದು ಅತಿಥಿ ಭಾಷಣದಲ್ಲಿ ಅವರು ಹೇಳಿದರು.

ಕಾರ್ಯಕ್ರಮದ ಮತ್ತೋರ್ವರು ಅತಿಥಿಗಳಾದ ಕುಮಾರಿ ಅರ್ಪಿತಾ ದ.ಕ. ಮ್ಯೂಚುವಲ್ ಬೆನಿಫಿಟ್ ಫಂಡ್ ಲಿಮಿಟೆಡ್ ಪುತ್ತೂರು ವಿಭಾಗದ ಪ್ರತಿನಿಧಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂ.ಪ್ರಕಾಶ್ ಪಾವ್ಲ್ ಡಿ’ಸೋಜ ವಹಿಸಿದ್ದರು. ನಮ್ಮ ವಿದ್ಯಾ ಸಂಸ್ಥೆ ಸಹಪಠ್ಯ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡಿ ವೈವಿಧ್ಯಮಯ ಕಲಿಕಾ ವಾತಾವರಣವನ್ನು ನಿರ್ಮಿಸಿ, ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ನಿರಂತರ ಶ್ರಮಿಸುವ ಗುರಿ ಹೊಂದಿದೆ ಎಂದು ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲರಾದ ವಂ.ಸುನಿಲ್ ಪ್ರವೀಣ್ ಪಿಂಟೋ, ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಜೆಸಿಂತಾ ವೇಗಸ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಚಿತ್ರಕಲಾ, ಸೈಂಟ್ ಜೋಕಿಮ್ಸ್ ಕಾಲೇಜು ಪ್ರಾಂಶುಪಾಲರಾದ ಕಿರಣ್ ಕುಮಾರ್, ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್, ಸೇಂಟ್ ಆನ್ಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ದಕ್ಷಾ, ಹಾಗೂ ವಿದ್ಯಾರ್ಥಿ ನಾಯಕಿ ಶಿಫಾ ಉಪಸ್ಥಿತರಿದ್ದರು.
ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಲತಾ ಸ್ವಾಗತಿಸಿ, ಪ್ರೌಢಶಾಲಾ ಶಿಕ್ಷಕಿ ಏಲಿಕುಟ್ಟಿ ವಂದಿಸಿದರು. ವಿದ್ಯಾರ್ಥಿನಿ ನಾಫಿಯಾ ಕಾರ್ಯಕ್ರಮವನ್ನು ನಿರೂಪಿಸಿದರು.






