ಡಿ.12ರಂದು ಉಜಿರೆ ರಬ್ಬರು ಸಹಕಾರಿ ಸಂಘದ ಕೊಕ್ಕಡ ಶಾಖೆ ಸ್ಥಳಾಂತರಗೊಂಡು ಉದ್ಘಾಟನೆ

ಶೇರ್ ಮಾಡಿ

ಕೊಕ್ಕಡ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣೆ ಸಹಕಾರಿ ಸಂಘ ಉಜಿರೆ ಇದರ ಕೊಕ್ಕಡ ಶಾಖೆ ಸ್ಥಳಾಂತರಗೊಂಡು ನೂತನ ಕಚೇರಿಯ ಉದ್ಘಾಟನಾ ಸಮಾರಂಭವು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಕೊಕ್ಕಡದ ಶ್ರೀಶ್ರೀದೇವಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಪೂವಾಜೆ ನೆರವೇರಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶ್ರೀಧರ್ ಜಿ. ಭಿಡೆ ವಹಿಸಲಿದ್ದಾರೆ.

ಸಂಘದ ಉಪಾಧ್ಯಕ್ಷ ಅನಂತ ಭಟ್. ಎಂ, ಶಾಖಾ ಪ್ರಬಂಧಕ ಸಂದೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ, ಜೊತೆಗೆ ಸಂಘದ ನಿರ್ದೇಶಕರು, ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ ಎಂದು ತಿಳಿಸಿದರು.

  •  

Leave a Reply

error: Content is protected !!