

ನೆಲ್ಯಾಡಿ: ಹಾರಾಡಿ ಸರಕಾರಿ ಉನ್ನತ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಹಿರಿಯ ವಿಭಾಗದ ಕವನ ವಾಚನ ಸ್ಪರ್ಧೆಯಲ್ಲಿ ಪಡುಬೆಟ್ಟು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ 7ನೇ ತರಗತಿಯ ವಿದ್ಯಾರ್ಥಿನಿ ಮೆಲಿಷ ನಿಶಾಲ್ ಮಸ್ಕರೇನ್ಹಸ್ ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಅವರು ನೆಲ್ಯಾಡಿ ಗ್ರಾಮದ ಪಡುಬೆಟ್ಟು ನಿವಾಸಿ ಮನೀಶ್ ಮಸ್ಕರೇನ್ಹಸ್ ಹಾಗೂ ಪಡುಬೆಟ್ಟು ಶಾಲೆಯ ಅತಿಥಿ ಶಿಕ್ಷಕಿ ನ್ಯಾನ್ಸಿ ಲಿಝಿ ದಂಪತಿಗಳ ಸುಪುತ್ರಿಯಾಗಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಮುಖ್ಯಶಿಕ್ಷಕ ಜೆಸ್ಸಿ ಕೆ.ಎ., ಸಹ ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು, ಪೋಷಕರು ಅಭಿನಂದನೆ ಸಲ್ಲಿಸಿದರು.






