

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಗುಡ್ಡೆತೋಟ ಪ್ರದೇಶದಲ್ಲಿ ಭಾನುವಾರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಪೂರಿತ ನಾಗರಹಾವು ಕಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ.
ಮೃತರನ್ನು ಗುಡ್ಡೆತೋಟ ನಿವಾಸಿ ಪ್ರೇಮ (55) ಎಂದು ಗುರುತಿಸಲಾಗಿದೆ. ಭಾನುವಾರ ಮಧ್ಯಾಹ್ನದ ವೇಳೆಯಲ್ಲಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಏಕಾಏಕಿ ನಾಗರಹಾವು ಕಡಿತಕ್ಕೆ ಒಳಗಾಗಿದ್ದಾರೆ. ಹಾವು ಕಡಿದ ತಕ್ಷಣ ಶಿಶಿಲ–ಅರಸಿನಮಕ್ಕಿ ಶೌರ್ಯ ವಿಪತ್ತು ತಂಡದ ಸದಸ್ಯರ ಸಹಕಾರದೊಂದಿಗೆ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದೇಹಕ್ಕೆ ವಿಷ ವೇಗವಾಗಿ ಆವರಿಸಿದ್ದರಿಂದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರಿಗೆ ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಇದ್ದಾರೆ.






