


ಕಡಬ: ಕಡಬ ತಾಲೂಕು ಪತ್ರಕರ್ತ ಸಂಘದ 2025–28ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಹಾಗೂ ಪರಿಶೀಲನೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸಲ್ಲಿಕೆಯಾಗಿದ್ದ ಎಲ್ಲಾ ನಾಮಪತ್ರಗಳು ಕ್ರಮಬದ್ಧವಾಗಿರುವುದರಿಂದ ಸಂಘದ ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಬಾಲಕೃಷ್ಣ ಕೆ.ಎಸ್., ಉಪಾಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಪ್ರವೀಣ್ ಕುಮಾರ್, ಕಾರ್ಯದರ್ಶಿ ಸ್ಥಾನಕ್ಕೆ ಸುಧಾಕರ ಆಚಾರ್ಯ, ಕೋಶಾಧಿಕಾರಿ ಸ್ಥಾನಕ್ಕೆ ಪ್ರವೀಣ್ ರಾಜ್ ಅವರು ನಾಮಪತ್ರ ಸಲ್ಲಿಸಿದ್ದರು. ಇದೇ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನಗಳಿಗೆ ವಿಜಯಕುಮಾರ್, ರತ್ನಾಕರ, ಹರೀಶ್ ಬಿ., ನಾಗರಾಜ್ ಕೆ., ಸ್ವಾತಿ ಕೆ.ವಿ. ಅವರು ನಾಮಪತ್ರ ಸಲ್ಲಿಸಿದ್ದು, ಎಲ್ಲ ನಾಮಪತ್ರಗಳು ಮಾನ್ಯವಾಗಿರುವುದರಿಂದ ಇವರೆಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.






