ಹಾವು ಕಡಿತ ತಡೆಗಟ್ಟುವಿಕೆ ಕುರಿತು ಜಾಗೃತಿ ಶಿಬಿರ

ಶೇರ್ ಮಾಡಿ

ಕೊಕ್ಕಡ: ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಡಿತದಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟುವ ಹಾಗೂ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಶಿಶಿಲದಲ್ಲಿ ಹಾವು ಕಡಿತ ತಡೆಗಟ್ಟುವಿಕೆ ಹಾಗೂ ನಿಯಂತ್ರಣ ಮಾಹಿತಿ ಶಿಬಿರವನ್ನು ಶಿಶಿಲ ಗ್ರಾಮ ಪಂಚಾಯತ್, ಆಯುಷ್ಮಾನ್ ಆರೋಗ್ಯ ಮಂದಿರ ಶಿಶಿಲ, ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ಶಿಶಿಲ, ಸ್ತ್ರೀ ಶಕ್ತಿ ಸಂಘಗಳು ಹಾಗೂ ಸೃಷ್ಟಿ ಸಂಜೀವಿನಿ ಒಕ್ಕೂಟ ಶಿಶಿಲ ಇವರ ಸಂಯುಕ್ತ ಆಶ್ರಯದಲ್ಲಿ ವೈಕುಂಠಪುರ ಸಮುದಾಯ ಭವನದಲ್ಲಿ ಆಯೋಜಿಸಲಾಯಿತು.

ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಅಧ್ಯಕ್ಷ ರಾಮಚಂದ್ರ ಕೆ, ವಾಲ್ಮೀಕಿ ಆಶ್ರಮ ಶಾಲೆಯ ಮುಖ್ಯಶಿಕ್ಷಕ ಕರುಣಾಕರ, ಸೃಷ್ಟಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಮೀನಾಕ್ಷಿ, ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಕಾರ್ಯದರ್ಶಿ ವಿವೇಕಾನಂದ ಹಾಗೂ ಸೃಷ್ಟಿ ಸಂಜೀವಿನಿ ಒಕ್ಕೂಟದ ಮುಖ್ಯ ಬರಹಗಾರ ಶಾರದಾ ಉಪಸ್ಥಿತರಿದ್ದರು.

ಶಿಬಿರದ ಪ್ರಮುಖ ಆಕರ್ಷಣೆಯಾಗಿ ಕಿರು ನಾಟಕದ ಮೂಲಕ ಹಾವು ಕಡಿತವಾದ ಬಳಿಕ ಮಾಡಬೇಕಾದ ಹಾಗೂ ಮಾಡಬಾರದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಸರಳ ಹಾಗೂ ಪರಿಣಾಮಕಾರಿಯಾಗಿ ಜಾಗೃತಿ ನೀಡಲಾಯಿತು. ಬಳಿಕ ಆಯುಷ್ಮಾನ್ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಪವಿತ್ರಾ ಅವರು ಹಾವು ಕಡಿತದ ನಂತರ ತಕ್ಷಣ ಕೈಗೊಳ್ಳಬೇಕಾದ ಪ್ರಾಥಮಿಕ ಚಿಕಿತ್ಸೆ, ಆಸ್ಪತ್ರೆಗೆ ಸಾಗಿಸುವ ಕ್ರಮಗಳು ಹಾಗೂ ಮೂಢನಂಬಿಕೆಗಳಿಂದ ದೂರವಿರುವ ಅಗತ್ಯದ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಕೃಷಿ ಸಖಿ ಸುಮಾ ಸಂಜಯ್ ಕಾರ್ಯಕ್ರಮ ನಿರೂಪಿಸಿದರು. ಆಶಾ ಕಾರ್ಯಕರ್ತೆಯರು, ಅಂಗನವಡಿ ಕಾರ್ಯಕರ್ತೆಯರು, ಯುವಕ ಮಂಡಲದ ಸದಸ್ಯರು ಹಾಗೂ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ವೃಂದ ಶಿಬಿರದ ಯಶಸ್ಸಿಗೆ ಸಹಕರಿಸಿದರು. ಶಿಬಿರಕ್ಕೆ ಗ್ರಾಮಸ್ಥರಿಂದ ಉತ್ತಮ ಸ್ಪಂದನೆ ದೊರಕಿತು.

  •  

Leave a Reply

error: Content is protected !!