

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪುತ್ತೂರು ನಗರ ಠಾಣಾ ಪಿ.ಎಸ್.ಐ ಜನಾರ್ಧನ ಕೆ.ಎಂ ಅವರು ಸಿಬಂದಿಗಳೊಂದಿಗೆ ಜ.2 ರಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಸಂದರ್ಭದಲ್ಲಿ ಶಂಕಿತ ವ್ಯಕ್ತಿಯನ್ನು ತಡೆದು ವಿಚಾರಣೆ ನಡೆಸಿದಾಗ ಆತನು ಪುತ್ತೂರು ಕಸಬಾ ಗ್ರಾಮದ ನಿವಾಸಿ ಮಹಮ್ಮದ್ ತೌಸೀಫ್ (36) ಎಂಬುದಾಗಿ ತಿಳಿದುಬಂದಿದೆ. ತನಿಖೆ ವೇಳೆ ತನ್ನ ಬಳಿ ನಿಷೇಧಿತ ಗಾಂಜಾ ಇರುವುದಾಗಿ ಆತನು ಒಪ್ಪಿಕೊಂಡಿದ್ದು, ತಪಾಸಣೆ ನಡೆಸಿದಾಗ ಸುಮಾರು 400 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮಕ್ಕಾಗಿ ಆರೋಪಿಯನ್ನು ವಶಕ್ಕೆ ಪಡೆದು ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 02/2026ರಂತೆ, ಎನ್‌ಡಿಪಿಎಸ್ ಕಾಯ್ದೆ 1985ರ ಕಲಂ 8(ಸಿ), 20(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.






