ನೆಲ್ಯಾಡಿ: ಸಾಲಬಾಧೆ–ಅಮಲು ಪದಾರ್ಥಗಳ ವ್ಯಸನ: ಇಲಿಪೇಸ್ಟ್ ಸೇವಿಸಿ ಯುವಕ ಆತ್ಮಹತ್ಯೆ

ಶೇರ್ ಮಾಡಿ

ನೆಲ್ಯಾಡಿ: ಸಾಲಬಾಧೆ ಹಾಗೂ ಅಮಲು ಪದಾರ್ಥಗಳ ವ್ಯಸನದಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಯುವಕನೋರ್ವ ಇಲಿಪೇಸ್ಟ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಚಾಮತಮೂಲೆ ಎಂಬಲ್ಲಿ ಸಂಭವಿಸಿದೆ.

ಮೃತನನ್ನು ಕೊಣಾಲು ಗ್ರಾಮದ ಚಾಮತಮೂಲೆ ನಿವಾಸಿ ಯತಿನ್(27) ಎಂದು ಗುರುತಿಸಲಾಗಿದೆ.

ಮೃತ ಯತಿನ್ ವ್ಯವಹಾರ ಉದ್ದೇಶಕ್ಕಾಗಿ ಕೆಲವೊಂದು ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದುಕೊಂಡಿದ್ದ. ಆದರೆ ವ್ಯವಹಾರದಲ್ಲಿ ನಷ್ಟ ಉಂಟಾಗಿ ಸಾಲ ತೀರಿಸಲಾಗದೇ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಇದರಿಂದಾಗಿ ವಿಪರೀತ ಮದ್ಯಪಾನಕ್ಕೆ ಒಳಗಾಗಿದ್ದು, ಕ್ರಮೇಣ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಶನಿವಾರ ಸಂಜೆ ಮನೆಯಲ್ಲಿದ್ದ ಸಂದರ್ಭ ಯತಿನ್ ಇಲಿಪೇಸ್ಟ್ ಸೇವಿಸಿ ಅಸ್ವಸ್ಥಗೊಂಡಿದ್ದಾನೆ. ತಕ್ಷಣವೇ ಕುಟುಂಬದವರು ಆಟೋ ರಿಕ್ಷಾದ ಮೂಲಕ ನೆಲ್ಯಾಡಿಯ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಆತನ ಸ್ಥಿತಿ ಗಂಭೀರವಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದಾರೆ. ಬಳಿಕ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಿ ಒಳರೋಗಿಯಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೂ ಸ್ಪಂದಿಸದೆ ಸೋಮವಾರ ಬೆಳಗ್ಗೆ ಯತಿನ್ ಮೃತಪಟ್ಟಿದ್ದಾರೆ.

ಈ ಬಗ್ಗೆ ಮೃತನ ಸಹೋದರ ಸಚಿನ್ ಎಂಬವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  •  

Leave a Reply

error: Content is protected !!