

ನೆಲ್ಯಾಡಿ: ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ನಡೆದ ನೇಮೋತ್ಸವದ ವೇಳೆ ಅಪ್ರಾಪ್ತ ಬಾಲಕಿಯೊಬ್ಬಳ ಕೈ ಹಿಡಿದು ಎಳೆದು ಮಾನಭಂಗ ಮಾಡಲು ಯತ್ನಿಸಿದ ಆರೋಪದಡಿ ಸ್ಥಳೀಯ ವ್ಯಕ್ತಿಯೊಬ್ಬನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಾಲಕಿ ಕುಟುಂಬದೊಂದಿಗೆ ಕಟ್ಟೆಮಜಲು ನೇಮೋತ್ಸವ ವೀಕ್ಷಣೆಗೆ ತೆರಳಿದ್ದಳು. ನೇಮೋತ್ಸವ ನಡೆಯುತ್ತಿದ್ದ ಸಂದರ್ಭ ಬೆಳಗಿನ ಜಾವ ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಕಟ್ಟೆಮಜಲು ನಿವಾಸಿ ಚಂದ್ರಶೇಖರ ಎಂಬಾತ ಹದಿನೈದು ವರ್ಷದ ಬಾಲಕಿಯ ಕೈ ಹಿಡಿದು ಎಳೆದು ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ.






