


ಕೋರಿಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಗುರುವಾಯನಕೆರೆ–ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರ ವತಿಯಿಂದ ಕೋರಿಂಜದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಜ.11ರಂದು ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.
ವಾರ್ಷಿಕ ಜಾತ್ರೆಗೆ ಆಗಮಿಸುವ ಭಕ್ತರಿಗೆ ಸ್ವಚ್ಛ ಹಾಗೂ ಶುಚಿತ್ವಯುಕ್ತ ಪರಿಸರ ಒದಗಿಸುವ ಉದ್ದೇಶದಿಂದ ದೇವಸ್ಥಾನ ಆವರಣ, ಪ್ರವೇಶ ಮಾರ್ಗಗಳು ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು.
ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಅರ್ಚಕ ಕಾರ್ತಿಕ್ ಹೆಗಡೆ, ಭಜನಾ ಮಂಡಳಿ ಸದಸ್ಯರು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಗದೀಶ ಗೌಡ ಅಣವು, ಕಣಿಯೂರು ವಲಯದ ಮೇಲ್ವಿಚಾರಕಿ ಕುಮಾರಿ ಶಿಲ್ಪಾ, ಸೇವಾ ಪ್ರತಿನಿಧಿ ಸೀತಾರಾಮ ಆಳ್ವ, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು ಸಹಕಾರ ನೀಡಿದರು.






