


ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು, ಉಜಿರೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಯುವ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಮಾತನಾಡಿ, “ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ” ಎಂಬ ಸ್ವಾಮಿ ವಿವೇಕಾನಂದರ ಸಂದೇಶವನ್ನು ಉಲ್ಲೇಖಿಸಿ, ಯುವಜನತೆ ತಮ್ಮ ಜೀವನದಲ್ಲಿ ಸ್ಪಷ್ಟ ಗುರಿಯನ್ನು ಹೊಂದಿ ಶಿಸ್ತುಬದ್ಧವಾಗಿ ಬದುಕಬೇಕು ಎಂಬ ಸಂದೇಶವನ್ನು ವಿವೇಕಾನಂದರು ನೀಡಿದ್ದಾರೆ. ಇಂದಿನ ಯುವ ಸಮುದಾಯಕ್ಕೆ ಅವರು ಶಾಶ್ವತ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ರಾಜೇಶ್ ಬಿ, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಯಾದ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ, ಕಾಲೇಜಿನ ಉಪನ್ಯಾಸಕ ವೃಂದ, ಎನ್‌ಎಸ್‌ಎಸ್ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎನ್‌ಎಸ್‌ಎಸ್ ಸ್ವಯಂಸೇವಕ ಕಾರ್ತಿಕ್ ಸ್ವಾಗತಿಸಿ, ವಂದಿಸಿದರು.






