


ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ–ಕೌಕ್ರಾಡಿ ಇದರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಹಾಗೂ ಕಡಬ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ–ಕೌಕ್ರಾಡಿ ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ–ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ 2038ನೇ ಮದ್ಯವರ್ಜನ ಶಿಬಿರವು ಜ.20ರಿಂದ 27ರವರೆಗೆ ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿದೆ.
ಶಿಬಿರದ ಉದ್ಘಾಟನಾ ಸಮಾರಂಭವು ಜ.20ರಂದು ಪೂರ್ವಾಹ್ನ 10.30ಕ್ಕೆ ನಡೆಯಲಿದ್ದು, ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ. ಸವಣೂರು ವಕೀಲರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಾಬು ನಾಯ್ಕ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ–ಕೌಕ್ರಾಡಿ ಅಧ್ಯಕ್ಷ ರವಿಚಂದ್ರ ಹೊಸೊಕ್ಲು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿವೃತ್ತ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಿ.ಜಗನ್ನಾಥ ರೈ, ನೆಲ್ಯಾಡಿ ಗ್ರಾ. ಪಂ. ಅಧ್ಯಕ್ಷ ಸಲಾಂ ಬಿಲಾಲ್, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷ ಉದಯ್ ಕುಮಾರ್, ಕಡಬ ಪ. ಪಂ. ಅಧ್ಯಕ್ಷೆ ತಮ್ಮನ್ನಾ ಜಬೀನ್, ಕಡಬ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಸಂತೋಷ್ ಕೇನ್ಯ ಭಾಗವಹಿಸಲಿದ್ದಾರೆ.
ಜ.27ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಚನ ಹಾಗೂ ದಿವ್ಯ ಉಪಸ್ಥಿತಿಯಲ್ಲಿ ಅಧ್ಯಕ್ಷತೆಯನ್ನು ನೆಲ್ಯಾಡಿ–ಕೌಕ್ರಾಡಿ ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ, ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಮಧ್ಯವರ್ಜನ ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷ ಶ್ರೀಧರ ಗೋರೆ, ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾ ಸಂಸ್ಥೆಯ ಪ್ರಾಚಾರ್ಯ ಫಾ.ಡಾ.ವರ್ಗೀಸ್ ಕೈಪನಡ್ಕ, ಎಸ್.ಆರ್.ಕೆ. ಲ್ಯಾಡರ್ಸ್ ಪುತ್ತೂರಿನ ಉದ್ಯಮಿ ಕೇಶವ ಗೌಡ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಉಪಾಧ್ಯಕ್ಷ ಸೀತಾರಾಮ ಗೌಡ ಪೊಸವೊಳಿಕೆ, ನೆಲ್ಯಾಡಿ ವಲಯದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಭಾಗವಹಿಸಲಿದ್ದಾರೆ.
ಮಧ್ಯವರ್ಜನ ಶಿಬಿರದ ಪ್ರಯುಕ್ತ ಜ.21ರಂದು ಎಲ್ಲಾ ಸಂಘ–ಸಂಸ್ಥೆಗಳ ಸಹಕಾರದೊಂದಿಗೆ ಹೊರೆಕಾಣಿಕೆ ಕಾರ್ಯಕ್ರಮ ನಡೆಯಲಿದೆ. ಇದರ ಉದ್ಘಾಟನೆಯನ್ನು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ನೆರವೇರಿಸಲಿದ್ದಾರೆ ಎಂದು ಸಂಘಟನೆಯವರು ತಿಳಿಸಿದ್ದಾರೆ.






