


ಕಡಬ: ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಉದ್ಯಮಿಯಾಗಿದ್ದ ಅಶೋಕ್ ಕುಮಾರ್ ರೈ ವಜ್ರಪಾಣಿ ಅವರು ಹೃದಯಾಘಾತದಿಂದ ಜ.19ರಂದು ನಿಧನ ಹೊಂದಿದರು.
ಅಶೋಕ್ ಕುಮಾರ್ ರೈ ಅವರು ಅಸ್ವಸ್ಥಗೊಂಡು ಮನೆಯಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ವೇಳೆಗೆ ಮೃತಪಟ್ಟಿದ್ದಾರೆ.
ಮೃತರು ನ್ಯಾಚುರಲ್ ವಾಟರ್ ವಿತರಕರಾಗಿ ಪರಿಚಿತರಾಗಿದ್ದು, ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ ಕಡಬ ಯಕ್ಷ ಗೆಳೆಯರ ಬಳಗದ ಗೌರವಾಧ್ಯಕ್ಷರಾಗಿ, ಒಡಿಯೂರು ವಿವಿದ್ದೋದ್ದೇಶ ಸಹಕಾರಿ ಸಂಘದ ಕಡಬ ಶಾಖಾ ಸಲಹಾ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದರು
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.






