ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ

ಶೇರ್ ಮಾಡಿ

ನೆಲ್ಯಾಡಿ: ನಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವರಾಜ್ಯ ಮತ್ತು ಗಣರಾಜ್ಯದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. “ನಮ್ಮ ರಾಷ್ಟ್ರಧ್ವಜದ ಅಡಿಯಲ್ಲಿ ನಾವೆಲ್ಲರೂ ನಿಂತಾಗ ಜಾತಿ, ಧರ್ಮ, ಪಂಥಗಳ ಭೇದಭಾವ ಮರೆತು ನಾವೆಲ್ಲರೂ ಭಾರತೀಯರು ಎನ್ನುವ ಭಾವನೆ ನಮ್ಮಲ್ಲಿ ಮೂಡುತ್ತದೆ. ಗಣರಾಜ್ಯೋತ್ಸವದ ಧ್ವಜಾರೋಹಣದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಧನ್ಯರು ಹಾಗೂ ದೇಶಾಭಿಮಾನ ಉಳ್ಳವರು” ಎಂದು ಹೇಳಿದರು. ಇನ್ನು ಭಾರತೀಯ ಸಂವಿಧಾನದ ತತ್ವಗಳಾದ ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವವನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜೊತೆಗೆ ಸಂವಿಧಾನದ ಎಲ್ಲಾ ಆದರ್ಶಗಳನ್ನು ಪಾಲಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕ ಫಾ.ನೋಮಿಸ್ ಕುರಿಯಾ ಕೋಸ್, ಕಾಲೇಜಿನ ಪ್ರಾಚಾರ್ಯ ಏಲಿಯಾಸ್ ಎಂ.ಕೆ., ಪ್ರೌಢಶಾಲೆಯ ಮುಖ್ಯಗುರು ತೋಮಸ್ ಎಂ.ಐ., ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಹರಿಪ್ರಸಾದ್ ಕೆ., ಉಪನ್ಯಾಸಕರು, ಅಧ್ಯಾಪಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

error: Content is protected !!