ಫೆ.1 ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಭವ್ಯ ಹಿಂದೂ ಸಂಗಮ

ಶೇರ್ ಮಾಡಿ

ನೆಲ್ಯಾಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ಸಮಾಜ ಪರಿವರ್ತನೆಗೆ ಅಗತ್ಯವಾದ ಪಂಚಕಾರ್ಯಗಳ ಜಾಗೃತಿ ಮೂಡಿಸುವ ಜೊತೆಗೆ ಹಿಂದೂ ಸಂಘಟನೆಗಳ ಬಲವರ್ಧನೆ ಗುರಿಯೊಂದಿಗೆ ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಫೆ.1ರಂದು ಸಂಜೆ 3ಗಂಟೆಯಿಂದ ಹಿಂದೂ ಸಂಗಮ ಕಾರ್ಯಕ್ರಮ ಭವ್ಯವಾಗಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಸಂಜೆ 3ರಿಂದ ಭಜನಾ ಕಾರ್ಯಕ್ರಮ, ವಿಷ್ಣು ಸಹಸ್ರನಾಮ ಪಠಣ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ನಂತರ ಸಭಾ ಕಾರ್ಯಕ್ರಮ ನಡೆಯಲಿದೆ. ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ಮತ್ತು ಪರಿವಾರ ದೈವಗಳ ದೇವಸ್ಥಾನದ ಉಪಾಧ್ಯಕ್ಷ ಹರೀಶ್ ಪಟ್ಟಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಸತ್ಯಸಾಯಿ ಆಸ್ಪತ್ರೆ ನಿವೃತ್ತ ಸಹಾಯಕ ಕಾರ್ಯನಿರ್ವಹಣಾಧಿಕಾರಿ ವಸಂತಿ ರುಕ್ಮಯ್ಯ ಗೌಡ ದಗ್ಗೋಡಿ, ದೋಂತಿಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಸುಬ್ರಹ್ಮಣ್ಯ ಬಾಳ್ತಿಲ್ಲಾಯ, ಪಡುಪೆಟ್ಟು ಶ್ರೀ ವಿಷ್ಣುಮೂರ್ತಿ ದೇವಳದ ಆಡಳಿತ ಮೊಕ್ತೇಸರ ಡಾ.ಸುಬ್ರಹ್ಮಣ್ಯ ಶಬರಾಯ, ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಆಡಳಿತ ಮೊಕ್ತೇಸರ ಶುಭಕರ ಹೆಗ್ಗಡೆ, ಕೋಣಾಲು ಶ್ರೀ ವಿಷ್ಣುಮೂರ್ತಿ ದೇವಳದ ಆಡಳಿತ ಮೊಕ್ತೇಸರ ಮಾಧವ ಸರಳಾಯ, ಕಾವು-ಕೌಕ್ರಾಡಿ ಶ್ರೀ ತ್ರಿಗುಣಾತ್ಮಕ ದುರ್ಗಾಪರಮೇಶ್ವರಿ ದೇವಳದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ನೆಲ್ಯಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಳದ ಅಧ್ಯಕ್ಷ ರವಿಚಂದ್ರ ಹೊಸವಕ್ಲು, ಕುತ್ತಾಡಿ ಹಾರ್ಪಳ ಶ್ರೀ ಶಾಸ್ತಾರೇಶ್ವರ ದೇವಸ್ಥಾನ ಅಧ್ಯಕ್ಷ ಸುಂದರ ಗೌಡ ಅತ್ರಿಜಾಲು, ಮಾದೇರಿ ಶಬರಿಗಿರಿ ಶ್ರೀ ಅಯ್ಯಪ್ಪ ಸ್ವಾಮಿ ದೇವಳದ ಅಧ್ಯಕ್ಷ ಶಿವರಾಮ ಗೌಡ ಕೊರಡೇಲು ಇವರ ಗೌರವ ಉಪಸ್ಥಿತಿ ಇರಲಿದೆ.

ಗೌರವಾಧ್ಯಕ್ಷ ಗೋಪಾಲಕೃಷ್ಣ ಪಡ್ಡಿಲ್ಲಾಯ, ಅಧ್ಯಕ್ಷ ಹರಿರಾಮಚಂದ್ರ ಉಪ್ಪಿನಂಗಡಿ, ಸಂಯೋಜಕ ಗಣೇಶ್ ಕೊಕ್ಕಡ ಹಾಗೂ ಹಿಂದೂ ಸಂಗಮ ಆಯೋಜನಾ ಸಮಿತಿ ನೆಲ್ಯಾಡಿ ಮಂಡಲ ಸಂಯೋಜಕ ರವಿಪ್ರಸಾದ್ ಶೆಟ್ಟಿ ಬಲ್ಯ ಮಾಹಿತಿ ನೀಡಿದರು.

Leave a Reply

error: Content is protected !!