ನೆಲ್ಯಾಡಿ: ನರೇಗಾ ಯೋಜನೆ ರದ್ದು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಶೇರ್ ಮಾಡಿ

ನೆಲ್ಯಾಡಿ: ಕೇಂದ್ರ ಸರಕಾರ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ರದ್ದುಪಡಿಸಿ ನೂತನ ಕಾಯ್ದೆ ಜಾರಿಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ನೆಲ್ಯಾಡಿ ಗ್ರಾಮ ಸಮಿತಿ ಆಶ್ರಯದಲ್ಲಿ ಫೆ.7ರಂದು ನೆಲ್ಯಾಡಿ ಗ್ರಾ.ಪಂ.ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಗ್ರಾ.ಪಂ.ಗೆ ಮನವಿ ಸಲ್ಲಿಸಲಾಯಿತು.

ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮರು ಜಾರಿಗೊಳಿಸುವಂತೆಯೂ ಪ್ರತಿಭಟನಾಕಾರರು ಒತ್ತಾಯಿಸಿದರು. ಈ ವೇಳೆ ದ.ಕ.ಜಿಲ್ಲಾ ಕಾಂಗ್ರೆಸ್ ಮಹಿಳಾ ಕಾಂಗ್ರೆಸ್(ಗ್ರಾಮೀಣ) ಅಧ್ಯಕ್ಷೆ ಉಷಾ ಅಂಚನ್, ಜಿ.ಪಂ.ಮಾಜಿ ಸದಸ್ಯ ಸರ್ವೋತ್ತಮ ಗೌಡ, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜೋಸ್ ಕೆ.ಜೆ., ಕೆಡಿಪಿ ಸದಸ್ಯೆ ಉಷಾ ಜೋಯಿ, ಗ್ರಾ.ಪಂ.ಸದಸ್ಯರಾದ ಅಬ್ದುಲ್ ಜಬ್ಬಾರ್, ಮೊಹಮ್ಮದ್ ಇಕ್ಬಾಲ್, ಪುಷ್ಪಾಪಡುಬೆಟ್ಟು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Leave a Reply

error: Content is protected !!