ಫೆ.10; ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ನೂತನ ಅರಿವು ಕೇಂದ್ರ ಉದ್ಘಾಟನೆ

ಶೇರ್ ಮಾಡಿ

ನೆಲ್ಯಾಡಿ: ಕರ್ನಾಟಕ ಸರ್ಕಾರದ 15ನೇ ಹಣಕಾಸು ಆಯೋಗ ಮತ್ತು ಗ್ರಾಮ ಪಂಚಾಯಿತಿ ಸ್ವಂತ ನಿಧಿ ಅಡಿಯಲ್ಲಿ ನಿರ್ಮಿಸಲಾದ ಕೌಕ್ರಾಡಿ ಗ್ರಾಮ ಪಂಚಾಯಿತಿಯ ನೂತನ ಅರಿವು ಕೇಂದ್ರದ ಉದ್ಘಾಟನಾ ಸಮಾರಂಭ ಫೆ.10ರಂದು ಕೌಕ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ನೂತನ ಅರಿವು ಕೇಂದ್ರದ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಅದೇ ವೇಳೆ ಸಭಾ ಕಾರ್ಯಕ್ರಮವನ್ನು ರಾಜ್ಯ ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯ ಕುಮಾರ್ ಗೌಡ ವಹಿಸಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯರು ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಕಿಶೋರ್ ಕುಮಾರ್ ಪುತ್ತೂರು, ಡಾ.ಧನಂಜಯ ಸರ್ಜಿ, ಬಿ.ಎಲ್. ಬೋಜೇ ಗೌಡ, ದ.ಕ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಮಂಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಬರಿ, ಮಂಗಳೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಹಾಗೂ ಕಡಬ ತಾಲೂಕು ಪಂಚಾಯತಿನ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ಪುತ್ತೂರು ಪಂಚಾಯತ್ ರಾಜ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಭರತ್ ಕುಮಾರ್, ಕಡಬ ತಾಲೂಕು ಪಂಚಾಯತಿನ ಗ್ರಾಮೀಣಾಭಿವೃದ್ಧಿ ಸಹಾಯಕ ನಿರ್ದೇಶಕ ಸಂದೇಶ್ ಕೆ.ಎಸ್ ಮೊದಲಾದವರು ಭಾಗವಹಿಸಲಿದ್ದಾರೆ. ಈ ಕುರಿತು ಕೌಕ್ರಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಕುಮಾರ್ ಜಿ ಮಾಹಿತಿ ನೀಡಿದರು.

Leave a Reply

error: Content is protected !!