ಶಿಕ್ಷಕ ಆನಂದ ಅಜಿಲರಿಗೆ ‘ಸಾವಿತ್ರಿಬಾಯಿ ಫುಲೆ’ ರಾಜ್ಯ ಪ್ರಶಸ್ತಿ

ಶೇರ್ ಮಾಡಿ
ಶಿಕ್ಷಕ ಆನಂದ ಅಜಿಲರಿಗೆ ‘ಸಾವಿತ್ರಿಬಾಯಿ ಫುಲೆ’ ಪ್ರತಿಷ್ಠಿತ ರಾಜ್ಯ ಪ್ರಶಸ್ತಿ

ನೆಲ್ಯಾಡಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಬೆಂಗಳೂರಿನ ತ್ರಿಪುರವಾಸಿನಿ, ಅರಮನೆ ಮೈದಾನದಲ್ಲಿ ಫೆ.28ರಂದು ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಕಡಬ ಮಾದರಿ ಶಾಲೆಯ ಮುಖ್ಯ ಶಿಕ್ಷಕ ಆನಂದ ಅಜಿಲರಿಗೆ ಈ ವರ್ಷದ ಅತ್ಯಂತ ಪ್ರತಿಷ್ಠಿತ ‘ಸಾವಿತ್ರಿಬಾಯಿ ಫುಲೆ’ ರಾಜ್ಯ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು.

ರಾಜ್ಯದ ಶೈಕ್ಷಣಿಕ ವಲಯದಲ್ಲಿ ಬೋಧನೆ, ವಿದ್ಯಾರ್ಥಿಗಳ ಹಾಗೂ ಶಾಲೆಯ ಸಮಗ್ರ ಅಭಿವೃದ್ಧಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಮೂಲಕ ನೀಡಿದ ಅತ್ಯುನ್ನತ ಸೇವೆಯನ್ನು ಪರಿಗಣಿಸಿ ಈ ಗೌರವ ರಾಜ್ಯ ಮಟ್ಟದಲ್ಲಿ ಅವರಿಗೆ ಲಭಿಸಿದೆ.

ಸಮ್ಮೇಳನದ ಪ್ರಮುಖ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಿಕ್ಷಣ ಸಚಿವರು ಸೇರಿದಂತೆ ಅನೇಕ ಗಣ್ಯರು ಸೇರಿಕೊಂಡು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Leave a Reply

error: Content is protected !!