ಕೊಕ್ಕಡ ಸರ್ವಿಸ್ ಸ್ಟೇಷನ್ ಮಾಲೀಕ ಆತ್ಮಹತ್ಯೆಗೆ ಶರಣು

ಶೇರ್ ಮಾಡಿ
ಕೊಕ್ಕಡ ಸರ್ವಿಸ್ ಸ್ಟೇಷನ್ ಮಾಲೀಕ ಆತ್ಮಹತ್ಯೆಗೆ ಶರಣು

ಕೊಕ್ಕಡ: ಕೊಕ್ಕಡ ಸಮೀಪದ ಜೋಡುಮಾರ್ಗದ ಬಳಿ ವಾಹನಗಳ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಮನೆಯ ಸಮೀಪ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಮೃತರನ್ನು ಕೊಕ್ಕಡ ಗ್ರಾಮದ ಮುಂಡೂರುಪಳಿಕೆಯ ಬದಿಜಾಲು ನಿವಾಸಿ ಶಾಂತಪ್ಪ ಗೌಡ (43) ಎಂದು ಗುರುತಿಸಲಾಗಿದೆ. ಅವರು ಕಳೆದ ಎರಡು ವರ್ಷಗಳಿಂದ ಕೊಕ್ಕಡ ಸಮೀಪದ ಜೋಡುಮಾರ್ಗ ಪ್ರದೇಶದಲ್ಲಿ ವಾಹನಗಳ ಸರ್ವಿಸ್ ಸ್ಟೇಷನ್ ನಡೆಸಿಕೊಂಡು ಬರುತ್ತಿದ್ದರು ಎಂದು ತಿಳಿದುಬಂದಿದೆ.

ಶುಕ್ರವಾರದಂದು ಮನೆಯ ಸಮೀಪವೇ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಹಾಗೂ ಸಹೋದರರು ಇದ್ದಾರೆ.

Leave a Reply

error: Content is protected !!