




ಬೆಳ್ತಂಗಡಿ: ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ಬಂಗಾಡಿ ಕೊಲ್ಲಿ ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ತಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬಂಗಾಡಿ ಕೊಲ್ಲಿ ನೇತ್ರಾವತಿ ನದಿ ಕಿನಾರೆಯ ವಿಶಾಲ ಪ್ರದೇಶದ ಕಂಬಳ ಕ್ರೀಡಾಂಗಣದಲ್ಲಿ ನಡೆಯುವ 28ನೇ ವರ್ಷದ ಹೊನಲು ಬೆಳಕಿನ ಬಯಲು ಕಂಬಳವನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ ದೀಪ ಪ್ರಜ್ವಲನೆಗೊಳಿಸುವ ಮೂಲಕ ಚಾಲನೆ ನೀಡಿದರು.

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕಾಂಜಾನು ಅಧ್ಯಕ್ಷತೆ ವಹಿಸಿದ್ದರು. ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಮುಕುಂದ ಸುವರ್ಣ, ಖ್ಯಾತ ದಂತ ವೈದ್ಯರಾದ ಡಾ. ಎಂ.ಎಂ ದಯಾಕರ್ ಶುಭ ಕೋರಿದರು.
ವೇದಿಕೆಯಲ್ಲಿ ಉಜಿರೆಯ ಹಿರಿಯ ಉದ್ಯಮಿ ರವಿ ಚಕ್ಕಿತ್ತಾಯ, ಮಿತ್ತಬಾಗಿಲು ಗ್ರಾ.ಪಂ ಮಾಜಿ ಸದಸ್ಯ ಕೃಷ್ಣಪ್ಪ ಪೂಜಾರಿ, ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ, ಕಾಜೂರು ಆಡಳಿತ ಮಂಡಳಿ ಹಿರಿಯ ಪದಾಧಿಕಾರಿ ಬದ್ರುದ್ದೀನ್ ಕಾಜೂರು, ವಿಘ್ನೇಶ್ ಪ್ರಭು ಆಲಂದಡ್ಕ ಮೊದಲಾದವರು ಉಪಸ್ಥಿತರಿದ್ದರು.
ಬಂಗಾಡಿ ಕೊಲ್ಲಿ ಕಂಬಳ ಸಮಿತಿ ಅಧ್ಯಕ್ಷ ರಂಜನ್ ಜಿ ಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ಕೊಕ್ಕರ್ಣೆ, ಪ್ರಶಾಂತ್ ಕೆ ಎಸ್, ಉಪಾಧ್ಯಕ್ಷ ಸೂರಜ್ ವಳಂಬ್ರ, ಪ್ರಕಾಶ್ ಅಜೆಕಾರು ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಂಬಳ ಸಮಿತಿ ಉಪಾಧ್ಯಕ್ಷರುಗಳಾದ ಸೀತಾರಾಮ, ಹಾರ್ತಾಜೆ, ತುಂಗಪ್ಪ ಪೂಜಾರಿ, ಕಾಜೂರು, ವಿನಯಚಂದ್ರ, ಪಡೆಂಕಲ್ಲು, ಹಸೈನಾರ್ ಬಾವಲಿಬನ, ಕಿಶೋರ್ ಹೂರ್ಜೆ, ಕಾರ್ಯದರ್ಶಿಗಳಾದ ಭರತ್ ಕುಮಾರ್ ಬಂಗಾಡಿ, ಆನಂದ ಗೌಡ, ಮೈರ್ನೋಡಿ, ಮಧುಕರ ಸುವರ್ಣ, ಕೋಶಾಧಿಕಾರಿ ಖಾಸಿಂ, ಮಲ್ಲಿಗೆಮನೆ, ಯಶೋಧರ, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ ಕುಳೆಂಜಿರೋಡಿ, ವಿವಿಧ ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.
ಸತೀಶ್ ಮನ್ನಡ್ಕ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಕಿಶೋರ್ ಕುಮಾರ್ ವಳಂಬ್ರ ಸ್ವಾಗತಿಸಿದರು. ವಿನಯಚಂದ್ರ ಸೇನೆರೆಬೊಟ್ಟು ವಂದಿಸಿದರು.





