ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧದ ಆರೋಪದ ಬಗ್ಗೆ: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

ಶೇರ್ ಮಾಡಿ

ಮಂಗಳೂರು: ಕೆಲ ದಿನಗಳ ಹಿಂದೆ ಮಹಿಳೆಯರಿಬ್ಬರು ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್

ಈ ಕುರಿತು ನಡೆಸಲಾದ ಸಮಗ್ರ ಪ್ರಾಥಮಿಕ ತನಿಖೆಯಲ್ಲಿ ಸುಮತಿ ನಾಯಕ್ ಮತ್ತು ಅವಿತಾ ಮಿನೇಜನ್ ಅವರು ಮಾಡಿದ ದೂರುಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ಸಾಬೀತಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ದೂರುದಾರರಾದ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಅವರು ನೀಡಿದ ದೂರುಗಳು ದುರುದ್ದೇಶ ಪ್ರೇರಿತವಾಗಿದ್ದು, ಅಧಿಕಾರಿಯನ್ನು ಸಿಲುಕಿಸುವ ಉದ್ದೇಶ ಹೊಂದಿದ್ದವು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಆರೋಪಗಳಿಗೆ ಸಂಬಂದಿಸಿದಂತೆ ಯಾವುದೇ ಪೂರಕ ಸಾಕ್ಷಾಧಾರಗಳು ಲಭ್ಯವಾಗಿಲ್ಲ ಎಂದು ಕಮಿಷನರ್ ಸ್ಪಷ್ಟಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋ ಮತ್ತು ವಿಡಿಯೋಗಳಲ್ಲಿರುವ ಮಹಿಳೆಯರು ಅವುಗಳು ತಮ್ಮದೇ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಆವರು ಅಧಿಕಾರಿಯ ವಿರುದ್ಧ ಯಾವುದೇ ಅಧಿಕೃತ ದೂರು ನೀಡಲು ನಿರಾಕರಿಸಿದ್ದಾರೆ. ಈ ವಿಡಿಯೋಗಳನ್ನು ವಿನೋದ್ ಪಿಂಟೋ ಮತ್ತು ಇತರರು ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ಬಳಸಿಕೊಂಡಿದ್ದಾರೆ ಎಂಬುದು ತನಿಕೆಯಲ್ಲಿ ಬಹಿರಂಗವಾಗಿದೆ ಎಂದು ಕಮಿಷನರ್ ಹೇಳಿದ್ದಾರೆ.

ಅಧಿಕಾರಿಯ ಮೇಲೆ ಹೊರಿಸಲಾದ ಪ್ರಸ್ತುತ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳಾಗಿದ್ದರು ಆಡಿಯೋ ಮತ್ತು ವಿಡಿಯೋಗಳಲ್ಲಿ ಕಂಡುಬಂದಿರುವ ಮತ್ತು ನೈಜ ದುರ್ನಡತೆಯನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಯ ಹಳೆಯ ತಪ್ಪುಗಳ ಹಿನ್ನೆಲೆಯಲ್ಲಿ ಈಗಾಗಲೇ ಶಿಸ್ತುಕಮ್ಮ ಕೈಗೊಳ್ಳಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

ಠಾಣೆಗೆ ಬರುವ ಮಹಿಳೆಯರ ರಕ್ಷಣೆ ಮತ್ತು ಅವರೊಂದಿಗೆ ಗೌರಯುತವಾಗಿ ವರ್ತಿಸುವುದು ಪೊಲೀಸರ ಆದ್ಯ ಕರ್ತವ್ಯ. ಈ ಘಟನೆಯಿಂದ ಇಡಿ ಇಲಾಖೆಗೆ ಪಾಠವಾಗಿದ್ದು ಮುಂದಿನ ದಿನಗಳಲ್ಲಿ ಇಂತಹ ವರ್ತನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು. ಅದೇ ವೇಳೆ ವಯಕ್ತಿಕ ದ್ವೇಷಕ್ಕಾಗಿ ಸುಳ್ಳು ದೂರುಗಳನ್ನು ನೀಡಿ ತನಿಖೆಯ ಹಾದಿ ತಪ್ಪಿಸುವವರ ವಿರುದ್ಧವು ಕಾನೂನು ಕ್ರಮ ಜರಗಿಸಲಾಗುವುದು ಎಂದು ಕಮಿಷನರ್ ರೆಡ್ಡಿ ಎಚ್ಚರಿಸಿದ್ದಾರೆ

One thought on “ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧದ ಆರೋಪದ ಬಗ್ಗೆ: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

Leave a Reply

error: Content is protected !!