ಭೀಕರ ರಸ್ತೆ ಅಪಘಾತ – ಕಾರು ಪಲ್ಟಿ: ಮೂವರಿಗೆ ಗಂಭೀರ ಗಾಯ

ಶೇರ್ ಮಾಡಿ
ಭೀಕರ ರಸ್ತೆ ಅಪಘಾತ – ಕಾರು ಪಲ್ಟಿ: ಮೂವರಿಗೆ ಗಂಭೀರ ಗಾಯ

ನೆಲ್ಯಾಡಿ: ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರಲ್ಲಿ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.


ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ಸಾಗುತ್ತಿದ್ದ ಇಕೊ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಜುನಾಥ, ಪ್ರಮೋದ್ ಹಾಗೂ ತುಳಸಿ ಎಂದು ಗುರುತಿಸಲಾಗಿದ್ದು, ಪ್ರಿಯಾ, ವಿಠಲ, ಚಾಲಕ ಪ್ರೇಮಣ್ಣ, ಧನಲಕ್ಷ್ಮಿ ಮತ್ತು ಸಮರ್ಥ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ಸಾಗರ ಮೂಲದವರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ತಕ್ಷಣ ಸ್ಪಂದಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಹಾಗೂ ಮಂಗಳೂರು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

ಘಟನೆ ಸಂಬಂಧ ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!