ನೆಲ್ಯಾಡಿ: ಬಿ.ಸುದೀಪ್ ರೈ ಆತ್ಮಹತ್ಯೆ: ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನ

ಶೇರ್ ಮಾಡಿ

 

ನೆಲ್ಯಾಡಿ: ಬಿ.ಸುದೀಪ್ ರೈ ಆತ್ಮಹತ್ಯೆ: ಚಿಕಿತ್ಸೆ ಫಲಿಸದೆ ಮಂಗಳೂರಿನಲ್ಲಿ ಮೃತ್ಯು

ನೆಲ್ಯಾಡಿ : ಕಳೆದ ತಿಂಗಳ ಹಿಂದೆ ವಿವಾಹವಾಗಿದ್ದ ಉದ್ಯಮಿಯೊಬ್ಬರು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಜೀವನ್ಮರಣ ಹೊರಟದಲ್ಲಿದ್ದವರು ಮಾ.29ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿ ಪ್ರದೇಶದಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ, ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ. ಸುದೀಪ್ ರೈ (36) ಎಂದು ಗುರುತಿಸಲಾಗಿದೆ.

ಲಭ್ಯ ಮಾಹಿತಿಯ ಪ್ರಕಾರ, ಸುದೀಪ್ ರೈ ಅವರು ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ (28) ಅವರೊಂದಿಗೆ ಮನೆಮಂದಿಗೆ ತಿಳಿಸದೆ ಫೆಬ್ರವರಿ 17ರಂದು ವಿವಾಹ ನೊಂದಣಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಮಾ.17ರಂದು ತಿಂಡಿಯೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸುದೀಪ್ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮಾ.29ರಂದು ಬೆಳಗ್ಗೆ ನಿಧನರಾದರು.

ಸುದೀಪ್ ರೈ ಅವರು ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ SRN ಗ್ರೂಪ್ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಹಾಗೂ ಸೋಲಾರ್ ಉದ್ಯಮವನ್ನು ನಡೆಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಮೃತರ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

8 thoughts on “ನೆಲ್ಯಾಡಿ: ಬಿ.ಸುದೀಪ್ ರೈ ಆತ್ಮಹತ್ಯೆ: ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನ

Leave a Reply

error: Content is protected !!