ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಶೇರ್ ಮಾಡಿ

 

ವೇಗವಾಗಿ ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಬೆಳ್ತಂಗಡಿ: ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ಇಬ್ಬರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಗೇರುಕಟ್ಟೆ ಎಂಬಲ್ಲಿ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿನ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ, ಬಸ್ಸಿನ ಬಾಗಿಲು ಏಕಾಏಕಿ ತೆರೆದುಕೊಂಡಿದೆ. ಈ ವೇಳೆ ಬಾಗಿಲ ಬಳಿಯೇ ನಿಂತಿದ್ದ ಅಕ್ಕ ಮೊದಲು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಅವರನ್ನು ರಕ್ಷಿಸಲು ಹೋದ ತಂಗಿ ಕೂಡ ನಿಯಂತ್ರಣ ತಪ್ಪಿ ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ.

ಈ ಇಡೀ ದೃಶ್ಯವು ರಸ್ತೆಯ ಪಕ್ಕದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನೋಡುವವರ ಎದೆ ನಡುಗಿಸುವಂತಿದೆ. ಬಿದ್ದ ತಕ್ಷಣ ಸ್ಥಳೀಯರು ಓಡಿ ಬಂದು ವಿದ್ಯಾರ್ಥಿನಿಯರನ್ನು ರಕ್ಷಿಸಿ, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನ ನಿರ್ವಹಣೆ ಮತ್ತು ಚಾಲಕನ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Leave a Reply

error: Content is protected !!